ಶಿವಮೊಗ್ಗ: ಹೊಸನಗರ (Hosanagar) ತಾಲೂಕಿನ ನೆವಟೂರು ಆನೆಕೆರೆ ಸಮೀಪ ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಅರಣ್ಯ ಸಂಚಾರಿ (Forest Department) ದಳ ಯಶಸ್ವಿಯಾಗಿದೆ.
ಈ ಕೃತ್ಯದಲ್ಲಿ ಭಾಗಿಯಾಗಿದ್ದ ನೆವಟೂರು ಆನೆಕೆರೆ ನಿವಾಸಿಗಳಾದ ನಿಂಗಪ್ಪ ಹಾಗೂ ರಾಮಪ್ಪ ಎಂಬ ಇಬ್ಬರು ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ಪಿಎಸ್‌ಐ ವಿನಾಯಕ ಕೆ. ನೇತೃತ್ವದ ತಂಡ ದಾಳಿ ನಡೆಸಿದೆ. ಈ ವೇಳೆ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ 34.945 ಕೆ.ಜಿ ತೂಕದ ಜಿಂಕೆ ಮಾಂಸವನ್ನ ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಅರಣ್ಯ ಸಂಚಾರಿದಳದಿಂದ ದಿಢೀರ್ ದಾಳಿ – 21 ಕೆಜಿ ಜಿಂಕೆ ಮಾಂಸ ವಶ, ಅರೋಪಿಗಳು ಪರಾರಿ
ಪಿಎಸ್‌ಐ ವಿನಾಯಕ ಕೆ. ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ. ಪೊಲೀಸ್ ಸಿಬ್ಬಂದಿ ಆಂಜನೇಯ ಪಾಟೀಲ್, ಬಿ.ಸಿ. ಗಣೇಶ, ಚಂದ್ರಕಾಂತ, ಮಹೇಶ, ಹೆಚ್.ಬಿ. ದೊಡ್ಡಮನಿ ಹಾಗೂ ಪ್ರಮೋದಿನಿ ದಾಳಿಯಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ವಿದ್ಯುತ್ ಹಾಯಿಸಿ ಎರಡು ಜಿಂಕೆಗಳ ಬೇಟೆ – ಮೂವರು ಆರೋಪಿಗಳು ಅರೆಸ್ಟ್

