ಚಾಮರಾಜನಗರ: ಜಿಂಕೆ (Deer) ಬೇಟೆಯಾಡಿದ (Hunt) ಇಬ್ಬರನ್ನು ಪೊಲೀಸರು ಬಂಧಿಸಿದ ಘಟನೆ ಚಾಮರಾಜನಗರದಲ್ಲಿ (Chamarajanagara) ನಡೆದಿದೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ (Kollegala) ವನ್ಯ ಜೀವಿ ಅರಣ್ಯ ವಲಯದಲ್ಲಿ ಘಟನೆ ನಡೆದಿದ್ದು, ತಾಲೂಕಿನ ಕುಣಗಳ್ಳಿ ಗ್ರಾಮದ ಮೂರ್ತಿ ಹಾಗೂ ರಾಮು ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಜಿಂಕೆಯನ್ನು ಬೇಟೆಯಾಡಿ ಕೊಂದು ಅದರ ಮಾಂಸ ಕತ್ತರಿಸುತ್ತಿದ್ದ ಸಂದರ್ಭ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಇವರೊಂದಿಗಿದ್ದ ಇನ್ನೂ ಮೂವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಸಬ್‍ಇನ್‍ಸ್ಪೆಕ್ಟರ್ ಪತ್ನಿ ಅನುಮಾನಾಸ್ಪದ ಸಾವು – ಪತಿಯ ವಿರುದ್ಧ ಕೊಲೆ ಆರೋಪ
Advertisement
Advertisement
ಕೊಳ್ಳೇಗಾಲದ ರಾಯರಹಳ್ಳ ಅರಣ್ಯ ಪ್ರದೇಶದಲ್ಲಿ ನಾಡ ಬಂದೂಕು ಬಳಸಿ ಐವರು ಆರೋಪಿಗಳು ಜಿಂಕೆ ಬೇಟೆಯಾಡುತ್ತಿದ್ದ ಸಂದರ್ಭ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು, ಆರೋಪಿಗಳಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ಅಲ್ಲದೇ ಬಂಧಿತರಿಂದ ನಾಲ್ಕು ಚಾಕು, ಎರಡು ಮೊಬೈಲ್, ಮೂರು ಬೈಕ್ ಹಾಗೂ 35 ಕೆಜಿ ಜಿಂಕೆ ಮಾಂಸ ವಶಪಡಿಸಿಕೊಂಡಿದ್ದಾರೆ. ಪರಾರಿಯಾದ ಮೂವರು ಆರೋಪಿಗಳ ಬಂಧನಕ್ಕೆ ಅರಣ್ಯಾಧಿಕಾರಿಗಳು (Forest Officer) ಬಲೆ ಬೀಸಿದ್ದಾರೆ. ಇದನ್ನೂ ಓದಿ: ಇದು ರಾಕಿಭಾಯ್ ಇಲ್ಲದ ರಿಯಲ್ KGF – ಸಮುದ್ರದಲ್ಲಿ ಸಿಕ್ತು 20 ಕೋಟಿ ಮೌಲ್ಯದ ಚಿನ್ನ..!
Advertisement