ಬೆಂಗಳೂರು: ನಗರದ (Bengaluru) ಖಾಸಗಿ ಶಾಲೆಯೊಂದರ (School) ನಾಲ್ವರು ಉದ್ಯೋಗಿಗಳ ವಿರುದ್ಧ ಶಾಲೆ ಮತ್ತು ಶಿಕ್ಷಣ ಸಂಸ್ಥೆಗೆ ಸೇರಿದ 4 ಕೋಟಿ ರೂ. ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.
ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಶಾಲೆಗೆ ಆರೋಪಿಗಳು 2017ರಿಂದ 4 ಕೋಟಿ ರೂ. ವಂಚಿಸಿದ್ದಾರೆ. ವಿದ್ಯಾರ್ಥಿಗಳ ಶುಲ್ಕದ ಹಣವನ್ನು ಸ್ವಂತಕ್ಕೆ ಬಳಸಿಕೊಂಡಿದ್ದಾರೆ. ಶಾಲೆ & ಟ್ರಸ್ಟ್ ನಲ್ಲಿ ಅಕೌಂಟೆಂಟ್ಸ್, ಟ್ರಾನ್ಸ್ಪೋರ್ಟ್ ಇನ್ಚಾರ್ಜ್ ಆಗಿದ್ದ ಸಾಗರ್, ಮುರುಳಿ, ಮನೋಜ್, ಮೋಹನ್ ಮತ್ತು ಕಿಶೋರ್ ಎಂಬವರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಕೆಲಸ ಗಿಟ್ಟಿಸಿಕೊಳ್ಳಲು ಪಾಕ್ ರಾಷ್ಟ್ರೀಯತೆ ಮುಚ್ಚಿಟ್ಟಿದ್ದ ಶಿಕ್ಷಕಿ ವಿರುದ್ಧ FIR
ಈ ಸಂಬಂಧ ಶಿಕ್ಷಣ ಸಂಸ್ಥೆಯ ನಿರ್ದೇಶಕ ಸಿಸಿಬಿಗೆ (CCB) ದೂರು ನೀಡಿದ್ದರು. ದೂರಿನಡಿ ಎಫ್ಐಆರ್ ದಾಖಲಿಸಿಕೊಂಡು, ಸಾಗರ್ ಮತ್ತು ಮನೋಜ್ನನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ – ಸ್ಥಳದಲ್ಲೇ ನಾಲ್ವರ ದುರ್ಮರಣ

