ಮಡಿಕೇರಿ: ಅಕ್ರಮ ಗಾಂಜಾ (Drugs) ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಮಡಿಕೇರಿಯಲ್ಲಿ (Madikeri) ನಡೆದಿದೆ.
ಬೇತು ಗ್ರಾಮದ ನಿವಾಸಿ ಹಕ್ ಎಂ.ಬಿ (31) ಹಾಗೂ ಎಂ.ಬಾಡಗ ಗ್ರಾಮದ ನಿವಾಸಿ ಬಿ.ಎಂ.ರಶೀದ್ (23) ಬಂಧಿತ ಆರೋಪಿಗಳು. ಇವರಿಬ್ಬರೂ ಕೊಡಗು (Kodagu) ಜಿಲ್ಲಾ ವ್ಯಾಪ್ತಿಯ ಮಡಿಕೇರಿ ನಗರ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದು, ಇವರನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ. ಇದನ್ನೂ ಓದಿ: ಪೊಲೀಸರಿಂದ ತಪ್ಪಿಸಿಕೊಳ್ಳುವ ಸಲುವಾಗಿ ಸೇತುವೆ ಮೇಲಿನಿಂದ ಹಾರಿ ವ್ಯಕ್ತಿ ಸಾವು
ಮಡಿಕೇರಿ ನಗರ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ಸಾರ್ವಜನಿಕರಿಂದ ದೂರು ಬರುತ್ತಿತ್ತು. ಇದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಮಡಿಕೇರಿ ಉಪವಿಭಾಗದ ಡಿಎಸ್‌ಪಿ ಎಂ.ಜಗದೀಶ್, ಮಡಿಕೇರಿ ನಗರ ವೃತ್ತದ ಸಿಪಿಐ ಉಮೇಶ್ ಉಪ್ಪಳಿಕೆ, ಮಡಿಕೇರಿ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಎಂ.ಶ್ರೀನಿವಾಸ ಹಾಗೂ ಸಿಬ್ಬಂದಿ ಮತ್ತು ಡಿಸಿಆರ್‌ಬಿ ಸಿಬ್ಬಂದಿ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಲಾಗುತ್ತಿತ್ತು. ಇದನ್ನೂ ಓದಿ: ಸೈಟ್ ವಿಚಾರಕ್ಕೆ ಗ್ರಾಮಪಂಚಾಯ್ತಿ ಸಿಬ್ಬಂದಿಯಿಂದ ಮಹಿಳೆಗೆ ಚಾಕು ಇರಿತ
ಈ ಸಂದರ್ಭ ಮಡಿಕೇರಿ ನಗರದ ಸ್ಟೀವರ್ಟ್ ಹಿಲ್ ರಸ್ತೆ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೇ 683 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ವಿವಿಧ ಬ್ರ‍್ಯಾಂಡ್‌ಗಳ ನಕಲಿ ಪಾನ್‌ಮಸಾಲಾ ತಯಾರಿಕೆ – ಘಟಕದ ಮೇಲೆ ಬೀದರ್ ಪೊಲೀಸರು ದಾಳಿ