ಚಂಡೀಗಢ: ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಮ್ಮೆ ನಿರ್ಭಯ ಪ್ರಕರಣ ನಡೆದಿದ್ದು, ಭೀಕರವಾಗಿ 11 ವರ್ಷದ ಅಪ್ರಾಪ್ತೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ನಡೆದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಪ್ರದೀಪ್ ಕುಮಾರ್ (27) ಮತ್ತು ಸಾಗರ್ (22) ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ ಪಾಣಿಪತ್ ಜಿಲ್ಲೆಯ ಹಳ್ಳಿಯಲ್ಲಿ 11 ವರ್ಷದ ಬಾಲಕಿಯ ದೇಹ ಪತ್ತೆಯಾಗಿದ್ದು, ಭಾನುವಾರ ಸಂಜೆ ಬಾಲಕಿ ಕಸವನ್ನು ಎಸೆಯಲು ತನ್ನ ಮನೆಯಿಂದ ಹೊರಗೆ ಬಂದಾಗ ಇಬ್ಬರು ಕಾಮುಕರು ಅಪಹರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿಯ ಮೇಲೆ ಕಾಮುಕರು ರಾಕ್ಷಸತನ ಮರೆದಿದ್ದು, ಆಕೆಯ ಬಟ್ಟೆಯನ್ನು ಸುಟ್ಟು ನಂತರ ಅತ್ಯಾಚಾರ ಮಾಡಿ ಅಮಾನುಷವಾಗಿ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ನಂತರ ಶವವನ್ನು ಬಿಡದೆ 4 ಗಂಟೆಗಳ ಕಾಲ ನಿರಂತರವಾಗಿ ಅತ್ಯಾಚಾರ ಎಸಗಿದ್ದಾರೆ. ಮೃತ ಬಾಲಕಿಯ ದೇಹವನ್ನು ಬಲ್ಮಿಕಿ ದೇವಾಲಯದ ಹಿಂದಿ ಒಂದು ಪೊದೆಯಲ್ಲಿ ಎಸೆದಿದ್ದಾರೆ ಎಂದು ಡಿಎಸ್‍ಪಿ ಸಂದೀಪ್ ಕುಮಾರ್ ಹೇಳಿದ್ದಾರೆ.
ಆರೋಪಿಗಳಿಬ್ಬರನ್ನು ಬಂಧಿಸಿ ವಿಚಾರಣೆ ಮಾಡುವ ವೇಳೆ, ತಾವೇ ಈ ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾರೆ. ಶನಿವಾರ ಸಂಜೆ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿ ಅತ್ಯಾಚಾರ ಎಸಗಿ ಭಾನುವಾರ ರಾತ್ರಿ ಸುಮಾರು 11 ಗಂಟೆಗೆ ತಂದು ಬಿಸಾಕಿರುವುದಾಗಿ ಹೇಳಿದ್ದಾರೆ.
ಇಬ್ಬರು ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಲಾಗಿದ್ದು, ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಸಂದೀಪ್ ಕುಮಾರ್ ಹೇಳಿದರು.