Chitradurga | ಕ್ರೈಸ್ತ ಧರ್ಮಕ್ಕೆ ಮತಾಂತರ ಯತ್ನ ಆರೋಪ – ಇಬ್ಬರ ಬಂಧನ

Public TV
1 Min Read
Chitradurga Conversion Arrest

ಚಿತ್ರದುರ್ಗ: ವಿವಿಧ ಆಮಿಷವೊಡ್ಡಿ ಜನರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಿಸಲು (Conversion) ಯತ್ನಿಸುತಿದ್ದಾರೆಂಬ ಆರೋಪದಡಿ ಇಬ್ಬರು ಆರೋಪಿಗಳನ್ನು ಚಿತ್ರದುರ್ಗ (Chitradurga) ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಚಿತ್ರದುರ್ಗದ ಪ್ರಶಾಂತ ನಗರದ ಮನೆಯೊಂದರಲ್ಲಿ ಸಭೆ ನಡೆಸಿ ಮತಾಂತರಕ್ಕೆ ಯತ್ನಿಸುತ್ತಿದ್ದಾರೆ. ಹಿಂದೂ ಧರ್ಮದ ಭಾವನೆಗಳಿಗೆ ನೋವುಂಟು ಮಾಡುವ ಮಾತನ್ನು ಆಡುತ್ತಿದ್ದು, ವಿವಿಧ ಆಮಿಷವೊಡ್ಡಿ ಕ್ರೈಸ್ತ ಧರ್ಮಕ್ಕೆ ಮತಾಂತರಿಸಲು ಯತ್ನಿಸಿದ್ದಾರೆಂದು ದೀಪಕ್ ರಾಜ್ ಎಂಬವರು ದೂರು ನೀಡಿದ್ದರು. ಇದನ್ನೂ ಓದಿ: ‌ಇರಾನ್‌ನಿಂದ ಖಂಡಾಂತರ ಕ್ಷಿಪಣಿ ದಾಳಿ – ದಕ್ಷಿಣ ಇಸ್ರೇಲ್‌ನ ಅತಿದೊಡ್ಡ ಆಸ್ಪತ್ರೆ ಉಡೀಸ್‌

ದೂರಿನ ಆಧಾರದ ಮೇರೆಗೆ ದಾಳಿ ನಡೆಸಿದ ಪೊಲೀಸರು, ಧನಂಜಯ್ (35), ಜೋಶೆವಾ ಇಸ್ರೇಲ್ (20) ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ಸಂಬಂಧ ಚಿತ್ರದುರ್ಗ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 38 ಲಕ್ಷಕ್ಕೂ ಅಧಿಕ ಮೌಲ್ಯದ ಮಾದಕ ವಸ್ತು ಜಪ್ತಿ – ಆರೋಪಿ ಅರೆಸ್ಟ್

Share This Article