ಉಡುಪಿ: ಅಪ್ರಾಪ್ತ ಬಾಲಕನ ಅಪಹರಣ ಪ್ರಕರಣವನ್ನು ಬ್ರಹ್ಮಾವರ ಪೊಲೀಸರು (Brahmavara Police) ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಮತ್ತೊಬ್ಬ ಬಾಲಾಪರಾಧಿಯನ್ನು ವಶಕ್ಕೆ ಪಡೆದು ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದಾರೆ. ಉಡುಪಿ (Udupi) ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಅಪ್ರಾಪ್ತ ಬಾಲಕನ ಅಪಹರಣ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಇದನ್ನೂ ಓದಿ: ಹನಿಮೂನ್ ಹಂತಕಿ ಸೋನಮ್‌ಗೆ ಬಿಗ್ ರಿಲೀಫ್ – ಬೇಲ್ ರದ್ದಿಗೆ ಸುಪ್ರೀಂ ನಕಾರ
ಪ್ರಕರಣ ಸಂಬಂಧ ವಿಖ್ಯಾತ್ ಆಚಾರ್ಯ (19) ಹಾಗೂ ಸುಚಿತ್ ನಾಯಕ್ (20) ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಅಲ್ಲದೆ, ಓರ್ವ ಬಾಲಾಪರಾಧಿಯನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿಗಳು 9ನೇ ತರಗತಿ ವಿದ್ಯಾರ್ಥಿಯನ್ನು ಕೇರಳಕ್ಕೆ ಕರೆದೊಯ್ದು, ವುಡ್ ಕಂಪನಿಯೊಂದರಲ್ಲಿ ಬಲವಂತವಾಗಿ ಕೆಲಸ ಮಾಡಿಸಿದ್ದರೆಂದು ಆರೋಪಿಸಲಾಗಿದೆ.
ಬಾಲಕನನ್ನು ಮನೆಗೆ ಹೋಗಲು ಅವಕಾಶ ನೀಡದೆ ವೈರ್‌ನಿಂದ ಹಲ್ಲೆ ನಡೆಸಿ, ಚೂರಿ ತೋರಿಸಿ ಕೊಲೆ ಬೆದರಿಕೆ ಹಾಕಿರುವ ಆರೋಪವೂ ಕೇಳಿಬಂದಿದೆ. ಪ್ರಕರಣ ಸಂಬಂಧ ಬ್ರಹ್ಮಾವರ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೇಸ್‌ನ ಸಾಕ್ಷಿಗೆ ಬೆದರಿಕೆ – ತನಿಖೆ ವೇಳೆ ಕೆಲ ವಿಚಾರಗಳು ಬೆಳಕಿಗೆ
