Sunday, 19th May 2019

ಬಿಜೆಪಿಯಲ್ಲಿ ಭಿನ್ನಮತ- ಪಕ್ಷ ತೊರೆಯಲು ಮುಂದಾಗಿದ್ದಾರೆ ಇಬ್ಬರು ಪ್ರಭಾವಿ ನಾಯಕರು..!

ಕಲಬುರಗಿ: ಜಿಲ್ಲಾ ಬಿಜೆಪಿ ಘಟಕದಲ್ಲಿ ಭಿನ್ನಮತ ಭುಗಿಲೆದ್ದಿದ್ದು ಬಿಜೆಪಿ ತೊರೆಯಲು ಇಬ್ಬರು ಪ್ರಭಾವಿ ನಾಯಕರಾದ ರಾಜ್ಯ ಬಿಜೆಪಿ ಉಪಾಧ್ಯಕ್ಷ, ಮಾಜಿ ಸಚಿವ ಬಾಬುರಾವ್ ಚೌಹ್ಹಾಣ್ ಮತ್ತು ಗುರುಮಠಕಲ್ ಬಿಜೆಪಿ ಮುಖಂಡ ಶ್ಯಾಮರಾವ್ ಪ್ಯಾಟಿ ಕಮಲಕ್ಕೆ ಗುಡ್ ಬೈ ಹೇಳಲು ನಿರ್ಧರಿಸಿದ್ದಾರೆ.

ಲೋಕಸಭೆ ಚುನಾವಣಾ ಕಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಲೇ ಇದೆ. ಒಂದೆಡೆ ಕಾಂಗ್ರೆಸ್ ನಾಯಕರು ಪಕ್ಷ ಬಿಟ್ಟು ಬಿಜೆಪಿ ಸೇರುತ್ತಿದ್ದರೆ, ಇನ್ನೊಂದೆಡೆ ಬಿಜೆಪಿ ನಾಯಕರು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಸದ್ಯ ಕಾಂಗ್ರೆಸ್ ನಾಯಕ ಎ.ಮಂಜು ಪಕ್ಷ ತೊರೆದು ಬಿಜೆಪಿ ಸೇರಿಲಿದ್ದಾರೆ ಎನ್ನಲಾಗುತ್ತಿದೆ. ಆದ್ರೆ ಇನ್ನೊಂದೆಡೆ ಬಿಜೆಪಿ ನಾಯಕರೇ ಕಾಂಗ್ರೆಸ್ ಸೇರಲು ಸಿದ್ಧತೆ ನಡೆಸುತ್ತಿದ್ದಾರೆ. ಬಿಜೆಪಿ ಬಿಡಲು ಮುಂದಾಗಿರುವ ಶ್ಯಾಮರಾವ್ ಪ್ಯಾಟಿ ಅವರು ಈ ಹಿಂದೆ ಗುರುಮಠಕಲ್ ಕ್ಷೇತ್ರದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿ, 5 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು.

ಆದರೆ ಬಿಜೆಪಿ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗದ ಹಿನ್ನೆಲೆಯಲ್ಲಿ ಪಕ್ಷ ತೊರೆಯಲು ಇದೀಗ ಅವರು ನಿರ್ಧಾರ ಮಾಡಿದ್ದಾರೆ. ಮಾರ್ಚ್ 18ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಬಾಬುರಾವ್ ಚೌಹ್ಹಾಣ್ ಹಾಗೂ ಶ್ಯಾಮರಾವ್ ಪ್ಯಾಟಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಮಾಹಿತಿ ಲಭ್ಯವಾಗಿದೆ.

ಈ ಸಮಾವೇಶ ಕಲಬುರಗಿ ನಗರದ ಎನ್‍ವ್ಹಿ ಕಾಲೇಜು ಮೈದಾನದಲ್ಲಿ ನಡೆಯಲಿದ್ದು ಆಪರೇಷನ್ ಹಸ್ತದ ಮೂಲಕ ಮತ್ತಷ್ಟು ಬಿಜೆಪಿ ನಾಯಕರನ್ನ ತನ್ನತ್ತ ಸೆಳೆಯಲು ಕಾಂಗ್ರೆಸ್ ಪ್ಲಾನ್ ಮಾಡುತ್ತಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply

Your email address will not be published. Required fields are marked *