ಟಾಲಿವುಡ್ (Tollywood) ಸೂಪರ್ ಹೀರೋ ಪವನ್ ಕಲ್ಯಾಣ್‌ಗೆ (Pawan Kalyan) ಅಪಾರ ಅಭಿಮಾನಿಗಳ ಬಳಗವಿದೆ. ಅವರ ಜನ್ಮದಿನವನ್ನು ಹಬ್ಬದಂತೆ ಸೆಲೆಬ್ರೇಟ್ ಮಾಡುವ ಅಭಿಮಾನಿಗಳಿದ್ದಾರೆ. ಈಗ ಅವರ ಹುಟ್ಟುಹಬ್ಬದ ಪ್ರಯುಕ್ತ ಪವನ್ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಸಿಕ್ಕಿದೆ. ಇದನ್ನೂ ಓದಿ:ಮಾಲಾಶ್ರೀ ಕೋರಿಕೆಯನ್ನ ಈಡೇರಿಸಿದ ದೈವ- ಕೊರಗಜ್ಜನ ಆದಿಸ್ಥಳಕ್ಕೆ ನಟಿ ಭೇಟಿ

ಪವನ್ ಕಲ್ಯಾಣ್ ನಟನೆಯ ಎರಡು ಟಾಪ್ ಸಿನಿಮಾಗಳು ಇದೀಗ ಅಭಿಮಾನಿಗಳಿಗೋಸ್ಕರ ಮತ್ತೊಮ್ಮೆ ಚಿತ್ರಮಂದಿರಗಳಲ್ಲಿ ರಿ-ರಿಲೀಸ್ ಆಗಲಿವೆ. 2004ರಲ್ಲಿ ಬಿಡುಗಡೆಗೊಂಡು ಬ್ಲಾಕ್‌ಬಸ್ಟರ್ ಹಿಟ್ ಆಗಿದ್ದ ‘ಗುಡುಂಬಾ ಶಂಕರ್’ ಮತ್ತು 2012ರಲ್ಲಿ ಪ್ರೇಕ್ಷಕರ ಮನಗೆದ್ದ ‘ಗಬ್ಬರ್ ಸಿಂಗ್’ ಚಿತ್ರಗಳು ತೆರೆ ಮೇಲೆ ಮತ್ತೊಮ್ಮೆ ರಾರಾಜಿಸಲಿದೆ. ಈ ಬಗ್ಗೆ ನಾಗಬಾಬು ಅವರು ಮಾಹಿತಿ ನೀಡಿದ್ದು, ಸಿನಿಮಾಗಳನ್ನು ಆಗಸ್ಟ್ 31 ಮತ್ತು ಸೆಪ್ಟೆಂಬರ್ 1ರಂದು ಮರು ಬಿಡುಗಡೆ ಮಾಡಲಿದ್ದೇವೆ ಎಂದು ಘೋಷಿಸಿದ್ದಾರೆ.
ಪವನ್ ಕಲ್ಯಾಣ್ ನಟನೆಯ ಚಿತ್ರ ಮರು ಬಿಡುಗಡೆಯಲ್ಲಿ ಗಳಿಸುವ ಆದಾಯವನ್ನು ಜನಸೇನಾ ಪಕ್ಷಕ್ಕೆ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ.


