ನೆಲಮಂಗಲ: ಬೆಂಗಳೂರು (Bengaluru) ಉತ್ತರ ತಾಲೂಕಿನ ಬೆತ್ತನಗೆರೆಯಲ್ಲಿ ರೈಲು ಹಳಿ ಬದಿಯಲ್ಲಿ ಇಬ್ಬರು ಬೌದ್ಧ ಬಿಕ್ಕುಗಳ (Buddhists) ಮೃತದೇಹ ಪತ್ತೆಯಾಗಿದ್ದು, ಚಲಿಸುತ್ತಿದ್ದ ರೈಲಿನಿಂದ ಬಿದ್ದು ಬೌದ್ಧ ಬಿಕ್ಕುಗಳು ಸಾವಿಗೀಡಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.
ಬೆಂಗಳೂರು-ಹಾಸನ ರೈಲು ಮಾರ್ಗದಲ್ಲಿ ಇಬ್ಬರು ಬೌದ್ಧ ಬಿಕ್ಕುಗಳ ಮೃತದೇಹ ಪತ್ತೆಯಾಗಿದೆ. ಇವರು ಕುಶಾಲನಗರದ ಗೋಲ್ಡನ್ ಟೆಂಪಲ್‌ಗೆ ಹೋಗಿ ಬೆಂಗಳೂರಿಗೆ ಬರುತ್ತಿದ್ದರು ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ಲಾರಿಗೆ ಕಾರು ಡಿಕ್ಕಿ – ಇಬ್ಬರ ಸಾವು, ಐವರು ಗಂಭೀರ
ಬೌದ್ಧ ಬಿಕ್ಕುಗಳು ಮೃತಪಟ್ಟಿರುವ ವಿಚಾರ ಟ್ರ್ಯಾಕ್ ಮ್ಯಾನ್‌ನಿಂದ ಬೆಳಕಿಗೆ ಬಂದಿದೆ. ರೈಲಿನ ಬಾಗಿಲಿನಲ್ಲಿ ಕುಳಿತಿದ್ದ ವೇಳೆ ಆಯತಪ್ಪಿ ಬಿದ್ದರುವ ಶಂಕೆ ವ್ಯಕ್ತವಾಗಿದೆ. ಸದ್ಯ ಮೃತದೇಹದ ಬಳಿ ಕುಶಾಲನಗರಕ್ಕೆ ಹೋಗಿರುವ ಬಸ್ ಟಿಕೆಟ್ ಪತ್ತೆಯಾಗಿದೆ. ಇದನ್ನೂ ಓದಿ: ಪತ್ನಿಯನ್ನು ಕರೆತರಲು ಹೋಗಿ ಅತ್ತೆಗೆ ಚಾಕು ಇರಿದು ಪರಾರಿಯಾದ!
ಆದರೆ ಈವರೆಗೂ ಮೃತರ ಗುರುತು ಪತ್ತೆಯಾಗಿಲ್ಲ. ಮೃತದೇಹಗಳನ್ನು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಯಶವಂತಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.