ಬೆಂಗಳೂರು: ರಸ್ತೆ ಪಕ್ಕದಲ್ಲಿದ್ದ ಬೃಹತ್ ಮರದ ರೆಂಬೆಯೊಂದು ಬಿದ್ದು ಎರಡು ಕಾರು (Car) ಹಾಗೂ ಒಂದು ಸ್ಕೂಟಿ ಜಖಂಗೊಂಡ ಘಟನೆ ಆರ್‌ಆರ್ ನಗರದ (RR Nagar) ಹಲಗೆವಡೆರಹಳ್ಳಿಯಲ್ಲಿ ನಡೆದಿದೆ.
ವಾಹನಗಳು ಜಖಂಗೊಂಡಿದ್ದರಿಂದ ಮಾಲೀಕರು ಆತಂಕಕ್ಕೆ ಒಳಗಾಗಿದ್ದಾರೆ. ಇನ್ನೂ ಸರ್ಕಾರಿ ಶಾಲೆ ಪಕ್ಕದಲ್ಲೇ ಈ ಘಟನೆ ನಡೆದಿದೆ. ಈ ವೇಳೆ ಮಕ್ಕಳು ಹಾಗೂ ಜನರು ಸ್ಥಳದಲ್ಲಿ ಇಲ್ಲದೇ ಇದ್ದಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಹೊತ್ತಿ ಉರಿದ ಕೇರಳದ ಸಾರಿಗೆ ಬಸ್ – ಪ್ರಯಾಣಿಕರು ಪಾರು
ಸ್ಥಳಕ್ಕೆ ಪೊಲೀಸರು ಹಾಗೂ ಜಿಬಿಎ (GBA) ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಬಿಎ ಸಿಬ್ಬಂದಿ ಮರದ ಕೊಂಬೆ ತೆರವುಗೊಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು | ಒಂದೇ ವಾರದಲ್ಲಿ ದೋಸೆಯಂತೆ ಕಿತ್ತು ಬಂದಿದೆ ರಸ್ತೆಗೆ ಹಾಕಿದ ಡಾಂಬರು
