ಮುಂಬೈ: ವಾಣಿಜ್ಯ ನಗರಿ ಮುಂಬೈಯಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ
ನಗರದ ಮರೋಲ್‍ನ ಮೈಮೂನ್ ಕಟ್ಟಡದಲ್ಲಿ ಬುಧವಾರ ರಾತ್ರಿ ಈ ದುರಂತ ನಡೆದಿದೆ. ಕಟ್ಟಡದ ಮೂರನೇ ಮಹಡಿಯಲ್ಲಿ ರಾತ್ರಿ ಸುಮಾರು 1.30 ಕ್ಕೆ ಬೆಂಕಿ ಹೊತ್ತಿಕೊಂಡಿದೆ.
Advertisement
ಅಂಧೇರಿ ಪೂರ್ವದಲ್ಲಿ ಮರೋಲ್‍ನ ಮೈಮೂನ್ ಮಂಝಿಲ್ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂದು ರಾತ್ರಿ ಸುಮಾರು 2.10ಕ್ಕೆ ಕರೆ ಬಂತು. ನಮ್ಮ ತಂಡ ಆಂಬುಲೆನ್ಸ್ ನೊಂದಿಗೆ ಸುಮಾರು 2.34 ಕ್ಕೆ ಸ್ಥಳಕ್ಕೆ ದೌಡಾಯಿಸಿತು. ಕಟ್ಟಡದಿಂದ 9 ಜನರನ್ನು ರಕ್ಷಿಸಲಾಯ್ತು. ಅದರಲ್ಲಿ 4 ಮಂದಿ ಮೃತಪಟ್ಟಿದ್ದು, ಗಾಯಗೊಂಡಿದ್ದ 5 ಜನರನ್ನ ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ ಶಾಮಕ ಸಿಬ್ಬಂದಿ ಮುಂಜಾನೆ 5 ಗಂಟೆ ವೇಳೆಗೆ ಸಂಪೂರ್ಣವಾಗಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
Advertisement
Advertisement
ಕಳೆದ ವಾರದಿಂದ ಮುಂಬೈನಲ್ಲಿ ಸಂಭವಿಸಿದ ಎರಡನೇ ಅಗ್ನಿ ದುರಂತ ಇದಾಗಿದೆ. ಡಿಸೆಂಬರ್ 28ರಂದು ನಗರದ ಲೋವರ್ ಪ್ಯಾರೆಲ್‍ನ ಕಮಲಾ ಮಿಲ್ಸ್ ಕಂಪೌಂಡ್‍ನಲ್ಲಿ ಅಗ್ನಿ ದುರಂತ ಸಂಭವಿಸಿತ್ತು. ಈ ಅವಘಡದಲ್ಲಿ 12 ಮಹಿಳೆಯರು ಸೇರಿದಂತೆ 14 ಮಂದಿ ಸಾವನ್ನಪ್ಪಿದ್ದು, 12 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.
Advertisement
ಸಾವನ್ನಪ್ಪಿದವರಲ್ಲಿ ಬಹುತೇಕ ಮಹಿಳೆಯರು ರೂಫ್ ಟಾಪ್ ರೆಸ್ಟೊರೆಂಟೊಂದರಲ್ಲಿ ಹುಟ್ಟುಹಬ್ಬ ಆಚರಣೆಗಾಗಿ ಬಂದಿದ್ದರು. ಹುಟ್ಟುಹಬ್ಬ ಆಚರಿಸಿಕೊಳ್ತಿದ್ದ 28 ವರ್ಷದ ಮಹಿಳೆ ಕೂಡ ಸಾವನ್ನಪ್ಪಿದ್ದರು. ಸೇನಾಪತಿ ಬಾಪತಿ ಮಾರ್ಗ್ ನ ಈ ಕಟ್ಟಡದಲ್ಲಿ ಗುರುವಾರ ತಡರಾತ್ರಿ 12.30 ಕ್ಕೆ ಮೂರು ಮತ್ತು ನಾಲ್ಕನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಇಡೀ ಕಟ್ಟಡಕ್ಕೆ ಆವರಿಸಿತ್ತೆಂದು ಪೊಲೀಸರು ತಿಳಿಸಿದ್ದರು. ಇದನ್ನು ಓದಿ: ಮುಂಬೈನಲ್ಲಿ ಅಗ್ನಿ ದುರಂತ- ಹುಟ್ಟುಹಬ್ಬ ಆಚರಿಸಿಕೊಳ್ತಿದ್ದ ಮಹಿಳೆ ಸೇರಿ 14 ಮಂದಿ ಸಾವು
#WATCH: Visuals of fire that broke out at Maimoon building in #Mumbai's Marol in the late night hours and claimed four lives. Situation now under control pic.twitter.com/nLp0zL9rdU
— ANI (@ANI) January 4, 2018