ಕಾರು, ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ – 8 ಮಂದಿ ದುರ್ಮರಣ

Public TV
1 Min Read
Car Collision

ಚೆನ್ನೈ: ಕಾರು (Car) ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮಕ್ಕಳು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ ಘಟನೆ ತಮಿಳುನಾಡಿನ (Tamil Nadu) ತಿರುವಣ್ಣಾಮಲೈನಲ್ಲಿ (Tiruvannamalai) ನಡೆದಿದೆ. ತಿರುವಣ್ಣಾಮಲೈ-ಬೆಂಗಳೂರು ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.

ಕಾರಿನಲ್ಲಿದ್ದವರು ತಮಿಳುನಾಡಿನ ದೇವಸ್ಥಾನವೊಂದಕ್ಕೆ ಭೇಟಿ ನೀಡಿ ಬೆಂಗಳೂರಿಗೆ (Bengaluru) ವಾಪಸ್ ಆಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಆರು ಜನ ಮೃತಪಟ್ಟಿದ್ದಾರೆ. ಇನ್ನಿಬ್ಬರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು (Police) ತಿಳಿಸಿದ್ದಾರೆ. ಇದನ್ನೂ ಓದಿ: ನಿಯಂತ್ರಣ ತಪ್ಪಿ ಕಂಟೈನರ್‌ಗೆ ಡಿಕ್ಕಿ ಹೊಡೆದ ಟಿಟಿ – 12 ಮಂದಿ ಸಾವು, 23 ಮಂದಿಗೆ ಗಾಯ

ಅಪಘಾತಕ್ಕೆ ಕಾರಣ ತಿಳಿದು ಬಂದಿಲ್ಲ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ತೀವ್ರ ಹಾನಿಗೊಳಗಾಗಿವೆ. ಇದರಿಂದಾಗಿ ವಾಹನಗಳು ಮಿತಿಮೀರಿದ ವೇಗದಲ್ಲಿ ಅಪಘಾತಕ್ಕೊಳಗಾಗಿವೆ ಎನ್ನಲಾಗಿದೆ. ಈ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕಿರುಕುಳಕ್ಕೆ ಬೇಸತ್ತು ಗುತ್ತಿಗೆದಾರ ಆತ್ಮಹತ್ಯೆ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article