ಬಳ್ಳಾರಿ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾಯಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿಯ ಹೊಸಪೇಟೆ ತಾಲೂಕಿನ ಹಾರುವನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗಂಗಮ್ಮ (35) ತನ್ನ ಮಕ್ಕಳಾದ ಆಕಾಶ್(8) ಹಾಗೂ ಗುರು(6) ಹೇನಿನ ಪುಡಿಯ ಔಷಧಿ ಕುಡಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿಷ ಸೇವನೆಯಿಂದ ಆಕಾಶ್ ಮೃತಪಟ್ಟಿದ್ದು, ಗುರುವಿನ ಸ್ಥಿತಿ ಗಂಭೀರವಾಗಿದ್ದು ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಗಂಗಮ್ಮ ಮಾನಸಿಕ ಅಸ್ವಸ್ಥಯಾಗಿದ್ದು ಕೌಟುಂಬಿಕ ಕಲಹದಿಂದ ಮನನೊಂದು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಿದೆ ಎಂದು ಸಂಬಂಧಿಕರು ಹೇಳಿದ್ದಾರೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.