ತುಮಕೂರು: ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿ ಬೆನಕನಹಳ್ಳಿ ಬಳಿಯ ಕೃಷಿ ಹೊಂಡದಲ್ಲಿ ನೀರು ಕುಡಿಯಲು ಹೋದ ಇಬ್ಬರು ಮಕ್ಕಳು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.
ಮಿಡಿಗೇಶಿ ಹೋಬಳಿ ಕಸಾಪುರ ಗ್ರಾಮದ ಮಂಜುನಾಥ್ ಅವರ ಪುತ್ರಿ ಸುಚಿತ್ರಾ (11), ಪುತ್ರ ರವೀಂದ್ರ (9) ಮೃತರು. ಮಂಜುನಾಥ್‌ಗೆ ಮೂವರು ಮಕ್ಕಳು. ಮೂವರು ಮೇಕೆ ಮೇಯಿಸಲು ಹೋಗಿದ್ದರು. ಬಾಯಾರಿಕೆಯಾಗಿ ನೀರು ಕುಡಿಯಲು ಕೃಷಿ ಹೊಂಡಕ್ಕೆ ಹೋಗಿದ್ದಾಗ ಕಾಲು ಜಾರಿ ಬಿದ್ದಿದ್ದಾರೆ. ಇದನ್ನೂ ಓದಿ: ಪ್ರೀತಿಯ ವಿದ್ಯಾರ್ಥಿಗಳೆ ನಿಮಗೆ ವಿದಾಯ ಎಂದು ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕಿ
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



