ಚಿಕ್ಕಬಳ್ಳಾಪುರ: ಕೃಷಿ ಹೊಂಡಕ್ಕೆ (Agricultural Pond) ಆಕಸ್ಮಿಕವಾಗಿ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ (Doddaballapura) ತೊಗರಿ ಘಟ್ಟ ಗ್ರಾಮದಲ್ಲಿ ನಡೆದಿದೆ.
ಸವಿತಾ – ಮುನಿರಾಜು ದಂಪತಿಯ ಮಗಳು ದಕ್ಷ (11) ಹಾಗೂ ಆಶಾ- ಪ್ರದೀಪ್ ದಂಪತಿಯ ಮಗ ಧನುಷ್ (4) ಮೃತ ಮಕ್ಕಳು. ಇಬ್ಬರು ಕೃಷಿ ಹೊಂಡದ ಬಳಿ ಆಟವಾಡಲು ತೆರಳಿದ್ದರು. ಈ ವೇಳೆ ಇಬ್ಬರು ಮಕ್ಕಳು ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ | ಮನೆಯೊಳಗೆ ಮಹಿಳೆ, ಸಾಕು ನಾಯಿಯ ಕೊಳೆತ ಶವ ಪತ್ತೆ
ಕೃಷಿ ಹೊಂಡಕ್ಕೆ ಸೂಕ್ತ ಬೇಲಿ ನಿರ್ಮಿಸದ ಕಾರಣ ಮಾಲೀಕ ಗುರುಮೂರ್ತಿ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಸಾಲ ಕೊಟ್ಟ 10 ಸಾವಿರ ಮರಳಿ ಬರಲಿಲ್ಲ – ಕಾಲೇಜು ಶುಲ್ಕ ಕಟ್ಟಲಾಗದೇ ವಿದ್ಯಾರ್ಥಿನಿ ಆತ್ಮಹತ್ಯೆ
