ರಾಮನಗರ: ಗೂಡ್ಸ್ ವಾಹನ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಇಬ್ಬರು (Children) ಮಕ್ಕಳು ಸಾವಿಗೀಡಾಗಿದ್ದಾರೆ.
ರಾಮನಗರ (Ramanagar) ತಾಲೂಕಿನ ಲಕ್ಷ್ಮೀಪುರ ಗ್ರಾಮದ ಬಳಿ ಟ್ಯೂಶನ್ ಮುಗಿಸಿ ಮನೆಗೆ ಹೊಗುತ್ತಿದ್ದಾಗ ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಐವರು ಮಕ್ಕಳನ್ನ ರಾಮನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಲಾಗ್ತಿತ್ತು.
ಆದರೆ ಚಿಕಿತ್ಸೆ ಫಲಿಸದೇ ರೋಹಿತ್ (5), ಶಾಲಿನಿ (8) ಮೃತಪಟ್ಟಿದ್ದಾರೆ. ಉಳಿದ ಸುಚಿತ್, ಗೌತಮಿ, ಲೇಖನಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಆಸ್ಪತ್ರೆಗೆ ಎಎಸ್ಪಿ ಸುರೇಶ್ ಭೇಟಿ, ಅಪಘಾತದ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ. ಇದನ್ನೂ ಓದಿ: ಯುವತಿ ಮದ್ವೆಗೆ ಒಪ್ಪಿಲ್ಲ ಅಂತ 850 ಅಡಿಕೆ ಗಿಡ ನಾಶ ಮಾಡಿದ ಕಿರಾತಕ
ಮಕ್ಕಳಿಗೆ ಗುದ್ದಿ ಎಸ್ಕೇಪ್ ಆಗಿದ್ದ ಗೂಡ್ಸ್ ವಾಹನ ಚಾಲಕ ತನ್ನ ವಾಹನವನ್ನ ಬೇರೆಡೆ ನಿಲ್ಲಿಸಿ ಎಸ್ಕೇಪ್ ಆಗಿದ್ದಾನೆ. ಈ ಸಂಬಂಧ ರಾಮನಗರ ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]