ಚಿಕ್ಕಮಗಳೂರು: ಕಾಫಿನಾಡಿನ ಇತಿಹಾಸದಲ್ಲಿ ಇದೇ ಮೊದಲ ಬಾರಿ 18.5 ಕೆ.ಜಿ. ತೂಕದ ಎರಡು ಚಿಪ್ಪು ಹಂದಿ ಪತ್ತೆಯಾಗಿದೆ.
ಸುಮಾರು ಎರಡರಿಂದ ಮೂರು ಲಕ್ಷ ಬೆಲೆಬಾಳುವ ಈ ಚಿಪ್ಪು ಹಂದಿಯನ್ನ ಬೇಟೆಯಾಡಿ ಬೇರೆಡೆ ಸಾಗಿಸಲು ಹೊಂಚು ಹಾಕುತ್ತಿದ್ದ ಇಬ್ಬರಲ್ಲಿ ಓರ್ವ ಆರೋಪಿಯನ್ನ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಅರಣ್ಯ ಸಿಬ್ಬಂದಿಗಳು ಬಂಧಿಸಿದ್ದಾರೆ.
Advertisement
ಹಲಸೂರು ಮೀಸಲು ಅರಣ್ಯದಲ್ಲಿ ಪ್ರದೀಪ್ ಹಾಗೂ ಪ್ರಕಾಶ್ ಇಬ್ಬರು ಯುವಕರು ಎರಡು ಚಿಪ್ಪು ಹಂದಿಯನ್ನ ಬೇಟೆಯಾಡಿದ್ದರು. ಬೇಟೆಯ ಬಳಿಕ ಹಂದಿಯನ್ನ ಬೇರೆಡೆ ಸಾಗಿಸಲು ಹೊಂಚು ಹಾಕುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಬಾಳೆಹೊನ್ನೂರು ಎ.ಸಿ.ಎಫ್ ಲೋಹಿತ್ ಕುಮಾರ್, ಆರ್.ಎಫ್.ಓ ತನುಜಕುಮಾರ್ ಹಾಗೂ ಡಿ.ಆರ್.ಎಫ್.ಓ ಸುಂದ್ರೇಶ್ ನೇತೃತ್ವದಲ್ಲಿ ದಾಳಿ ನಡೆಸಿ ಪ್ರದೀಪ್ ಎಂಬಾತನನ್ನ ಬಂಧಿಸಿ ಎರಡು ಚಿಪ್ಪು ಹಂದಿಯನ್ನ ರಕ್ಷಿಸಿದ್ದಾರೆ.
Advertisement
Advertisement
ಬಂಧಿತ ಆರೋಪಿಯಿಂದ 18.5 ಕೆ.ಜಿ.ತೂಕದ ಗಂಡು ಮತ್ತು ಹೆಣ್ಣು ಚಿಪ್ಪು ಹಂದಿ ಹಾಗೂ ಒಂದು ಬೈಕ್ ವಶ ಪಡಿಸಿಕೊಳ್ಳಲಾಗಿದೆ. ಈ ದಾಳಿಯಲ್ಲಿ ಮತ್ತೋರ್ವ ಆರೋಪಿ ಪ್ರಕಾಶ್ ನಾಪತ್ತೆಯಾಗಿದ್ದು, ಅರಣ್ಯಾಧಿಕಾರಿಗಳು ಪ್ರಕಾಶ್‍ಗಾಗಿ ಬಲೆ ಬೀಸಿದ್ದಾರೆ. ಈ ಚಿಪ್ಪು ಹಂದಿಗೆ ವಿದೇಶದಲ್ಲಿ ಭಾರೀ ಬೇಡಿಕೆ ಇದೆ ಎಂದು ಹೇಳಲಾಗುತ್ತಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv