ಬೆಳಗಾವಿ: ನೆರೆಯ ಮಹಾರಾಷ್ಟ್ರದ (Maharashtra) ತಿಲಾರಿ ಡ್ಯಾಂನಲ್ಲಿ ರಿವರ್ ಕ್ರಾಸಿಂಗ್ (River Crossing) ತರಬೇತಿಗೆ ಹೋಗಿದ್ದ ಬೆಳಗಾವಿ ಕಮಾಂಡೋ ಸೆಂಟರ್‌ನ ಇಬ್ಬರು ಕಮಾಂಡೋಗಳು (Commando) ಬೋಟ್ (Boat) ಮುಳುಗಿ ಮೃತಪಟ್ಟ ಘಟನೆ ನಡೆದಿದೆ.
ಬೆಳಗಾವಿಯ (Belagavi) ಜೆಎಲ್ ವಿಂಗ್ ಕಮಾಂಡೋ ತರಬೇತಿ ಕೇಂದ್ರದ ರಾಜಸ್ಥಾನ ಮೂಲದ ವಿಜಯ್ ಕುಮಾರ್ ದಿನವಾಲ್ (28) ಹಾಗೂ ಪಶ್ಚಿಮ ಬಂಗಾಳದ ದಿವಾಕರ್ ರಾಯ್(26) ಮೃತಪಟ್ಟಿದ್ದಾರೆ. ಇಬ್ಬರು ಜವಾನರು ಕಮಾಂಡೋ ಸೆಂಟರ್‌ನ ಸೈನಿಕರಿಗೆ ರಿವರ್ ಕ್ರಾಸಿಂಗ್ ತರಬೇತಿ ನೀಡುತ್ತಿದ್ದರು. ಬೋಟ್‌ನಲ್ಲಿ ರಿವರ್ ಕ್ರಾಸಿಂಗ್ ಮಾಡುತ್ತಿದ್ದ ಆರು ಜನ ಸೈನಿಕರ ಪೈಕಿ ಇಬ್ಬರು ಮೃತಪಟ್ಟಿದ್ದು, ನಾಲ್ವರು ಬದುಕುಳಿದಿದ್ದಾರೆ. ಇದನ್ನೂ ಓದಿ: ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಹರಿದ ಸರ್ಕಾರಿ ಬಸ್ – ಬಾಲಕ ಸ್ಥಳದಲ್ಲೇ ಸಾವು!
ಬೆಳಗಾವಿಯ ಕಮಾಂಡೋ ತರಬೇತಿ ವಿಭಾಗದ ಇಬ್ಬರು ಸೈನಿಕರು ರಿವರ್ ಕ್ರಾಸಿಂಗ್ ತರಬೇತಿ ಪಡೆಯಲು ತಿಲ್ಲಾರಿ ಡ್ಯಾಂ ಹಿನ್ನೀರಿನ ಜಲಪ್ರದೇಶಕ್ಕೆ ತೆರಳಿದ್ದರು. ಹಿನ್ನೀರಿನ ಒಂದು ದಡದಿಂದ ಇನ್ನೊಂದು ದಡಕ್ಕೆ ಬೋಟ್‌ನಲ್ಲಿ ಆರು ಜನ ಸೈನಿಕರು ತೆರಳಿದ್ದರು. ಮಧ್ಯದಲ್ಲಿಯೇ ಬೋಟ್ ಮುಳುಗಿದ್ದರಿಂದ ಇಬ್ಬರು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಸಾವಿನ ಮನೆಯಲ್ಲಿ ಚಿನ್ನಾಭರಣ ಕಳವು ಮಾಡಿ ಎಸ್ಕೇಪ್ ಆಗಿದ್ದ ಸಂಬಂಧಿಕರು ಅರೆಸ್ಟ್