ಶ್ರೀನಗರ: ಅಪರಿಚಿತ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದೆ.
ಮೊಹಮ್ಮದ್ ಸುಲ್ತಾನ್ ಹಾಗೂ ಫಯಾಜ್ ಅಹ್ಮದ್ ಗಾಯಗೊಂಡ ಪೊಲೀಸರು. ಜಮ್ಮು ಮತ್ತು ಕಾಶ್ಮೀರದ ಉತ್ತರ ಬಂಡಿಪೋರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಗಾಯಗೊಂಡವರು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ನಿರತರಾಗಿದ್ದರು ಎಂದು ಮೂಲಗಳು ತಿಳಿಸಿವೆ.
ಬಂಡಿಪೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಯೋತ್ಪಾದಕರು, ಇಬ್ಬರು ಪೊಲೀಸ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ದಾಳಿಯಲ್ಲಿ ಮೊಹಮ್ಮದ್ ಸುಲ್ತಾನ್ ಹಾಗೂ ಫಯಾಜ್ ಅಹ್ಮದ್ ಅವರಿಗೆ ಗುಂಡೇಟಿನಿಂದ ತೀವ್ರ ಗಾಯಗಳಾಗಿದ್ದವು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಮಾರ್ಗ ಮಧ್ಯದಲ್ಲೆ ಇಬ್ಬರು ಹುತಾತ್ಮರಾದರು. ಇದನ್ನೂ ಓದಿ: ಮಕ್ಕಳಿಗೂ ವಕ್ಕರಿಸಿತು ಹೊಸ ತಳಿ- ಮಹಾರಾಷ್ಟ್ರದಲ್ಲಿ 3 ವರ್ಷದ ಮಗುವಿನಲ್ಲಿ ಓಮಿಕ್ರಾನ್ ಪತ್ತೆ
ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಹಾಗೂ ಸಿಆರ್‌ಪಿಎಫ್ ಯೋಧರು ದಾಳಿ ನಡೆದ ಸ್ಥಳಕ್ಕೆ ಭೇಟಿ ನೀಡಿ ತನಿಖೆಯನ್ನು ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: 2 ಡೋಸ್ ಲಸಿಕೆ ಪಡೆದ 9 ತಿಂಗಳ ಬಳಿಕ ಬೂಸ್ಟರ್ ಡೋಸ್ ಪಡೆಯಲು ICMR ಅನುಮತಿ?