ಬೆಂಗಳೂರು: ಇಲ್ಲಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪರಾರಿಯಾಗಲು ಯತ್ನಿಸಿದ ಇಬ್ಬರು ಸೋಂಕಿತರನ್ನು ಹಿಡಿದು ಆಸ್ಪತ್ರೆಗೆ ದಾಖಲಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೆಂಗಳೂರಿನಲ್ಲಿ ನಿನ್ನೆ ಒಮಿಕ್ರಾನ್ ಬ್ಲಾಸ್ಟ್ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಅಂತರಾಷ್ಟ್ರೀಯ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣಿಟ್ಟು ಪ್ರತಿಯೊಬ್ಬರಿಗೂ ಕಡ್ಡಾಯ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ. ಕೋವಿಡ್ ಟೆಸ್ಟ್‌ನಲ್ಲಿ ನೆಗಟಿವ್ ಬಂದವ್ರಿಗೆ ಮಾತ್ರ ಹೊರ ಬರಲು ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಕೋವಿಡ್ ಟೆಸ್ಟ್‌ನಲ್ಲಿ ಪಾಸಿಟಿವ್ ಕಂಡುಬಂದರೆ ಕೂಡಲೇ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ 8ಕ್ಕೇರಿದ ಓಮಿಕ್ರಾನ್- ಸೋಂಕಿತರ ಟ್ರಾವೆಲ್ ಹಿಸ್ಟರಿ ಇಂತಿದೆ
Advertisement
Advertisement
ವಿಮಾನ ನಿಲ್ದಾಣದ ಒಳಭಾಗದಲ್ಲಿ ಖಾಸಗಿ ಲ್ಯಾಬೋರೇಟರಿಯಿಂದ ಕೋವಿಡ್ ಟೆಸ್ಟ್ ನಡೆಯುತ್ತಿದೆ. ಪಾಸಿಟಿವ್ ಬಂದವರನ್ನು ಪ್ರತ್ಯೇಕವಾಗಿ ಹೊರಭಾಗಕ್ಕೆ ಕರೆದೊಯ್ದು ಸ್ಯಾನಿಟೈಸ್ ಮಾಡುತ್ತಾ, ಹೊರ ಕರೆದುಕೊಂಡು ಬರಲಾಗುತ್ತೆ. ಈ ವೇಳೆ ಆರೋಗ್ಯ ಸಿಬ್ಬಂದಿ ಎಕ್ಸಿಟ್ ಆಗುವ ಪ್ರಯಾಣಿಕರನ್ನ ತಡೆದು ಸೋಂಕಿತರನ್ನ ಆಸ್ಪತ್ರೆಗೆ ಶಿಫ್ಟ್ ಮಾಡುತ್ತಿದ್ದಾರೆ.
Advertisement
ಅಂತೆಯೇ ಈಗಾಗಲೇ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಾಲ್ವರಲ್ಲಿ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಅಂಬುಲೆನ್ಸ್ ಕೂಡ ಬಂದಿತ್ತು. ಈ ವೇಳೆ ಇಬ್ಬರು ಸೋಂಕಿತರು ಅಲ್ಲಿಂದ ಎಸ್ಕೇಪ್ ಆಗಲು ಯತ್ನಿಸಿದ್ದರು. ಪರಿಣಾಮ ಈ ಇಬ್ಬರನ್ನು ಹಿಡಿಯಲು ಪೊಲೀಸರು ಹರಸಾಹಸ ಪಟ್ಟರು. ಇದನ್ನೂ ಓದಿ: ಭಾರತದ ಸ್ಪರ್ಧಿ ಸೇರಿ 17 ಮಂದಿಗೆ ಕೊರೊನಾ- Miss World 2021 ಫೈನಲ್ ಮುಂದೂಡಿಕೆ
Advertisement
ಇಬ್ಬರು ಸೋಂಕಿತರಿಂದಾಗಿ ಏರ್ ಪೋರ್ಟ್‌ನಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಸೋಂಕಿತರನ್ನು ಹಿಡಿಯಲು ಪೊಲೀಸರು ಸರ್ಕಸ್ ಮಾಡಿದರು. ಕೊನೆಗೆ ಇಬ್ಬರನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾದರು. ನಂತರ ನಾಲ್ವರನ್ನು ಕೂಡ ಬೌರಿಂಗ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು.