ಮಡಿಕೇರಿ: ಕೊಡಗು (Kodagu) ಜಿಲ್ಲೆಯಲ್ಲಿ ಒಂದೆಡೆ ಕಾಡಾನೆ ಹಾವಳಿಯಿಂದ ಗ್ರಾಮೀಣ ಜನರು ತೋಟಗಳಲ್ಲಿ ಓಡಾಡುವುದಕ್ಕೆ ಹಿಂದೇಟು ಹಾಕುತ್ತಿದ್ದರೆ, ಮತ್ತೊಂದೆಡೆ ಹುಲಿಗಳ (Tiger) ಅಟ್ಟಹಾಸ ಮುಂದುವರಿದಿದೆ. ಇದೀಗ ಮತ್ತೆ ಹುಲಿ ದಾಳಿಗೆ ಎರಡು ಹಸುಗಳು ಬಲಿಯಾದ ಘಟನೆ ಜಿಲ್ಲೆಯ ಪೊನ್ನಂಪೇಟೆ (Ponnampet) ತಾಲೂಕಿನ ಸುಳುಗೋಡು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಎಂ. ದಿನು ಎಂಬವರಿಗೆ ಸೇರಿದ 2 ಹಸುಗಳು ಹುಲಿಗೆ ಆಹಾರವಾಗಿದೆ. ಸದ್ಯ ಆನೆಗಳ ಮೂಲಕ ಹುಲಿಸೆರೆ ಕಾರ್ಯಾಚರಣೆ ಸಿದ್ಧತೆಗೆ ಅರಣ್ಯ ಇಲಾಖೆಯ ಸಿಬ್ಬಂದಿ ಮುಂದಾಗಿದ್ದಾರೆ. ಇದನ್ನೂ ಓದಿ: ಮಂಡ್ಯದ ಪಾಲಹಳ್ಳಿಯಲ್ಲಿ ಮತ್ತೆ ಹರಿದ ನೆತ್ತರು – ರೌಡಿಶೀಟರ್‌ನ ಬರ್ಬರ ಹತ್ಯೆ
ಸ್ಥಳಕ್ಕೆ ರಾಜ್ಯ ವನ್ಯಜೀವಿಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೂಡಲೇ ಹಸುಗಳಿಗೆ ಪರಿಹಾರದ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ ಕಡಿಮೆ ದರದಲ್ಲಿ ಅಕ್ಕಿ ಕೊಡಲು ಕೇಂದ್ರ ಸರ್ಕಾರ ಸಿದ್ಧ – ಜೋಶಿ