ಶ್ರೀನಗರ: 28 ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ ಬಸ್‌ವೊಂದು (Bus) ಸ್ಕಿಡ್ ಆಗಿ 200 ಅಡಿ ಆಳದ ಕಮರಿಗೆ ಉರುಳಿದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ (Jammu Kashmir) ದೋಡಾ (Doda) ಜಿಲ್ಲೆಯಲ್ಲಿ ನಡೆದಿದೆ.
ಖಾಸಗಿ ಬಸ್ ಭಾಲೆಸ್ಸಾದಿಂದ ಥಾತ್ರಿಗೆ ತೆರಳುತ್ತಿದ್ದಾಗ ಬೆಳಗ್ಗೆ 10:30ರ ಸುಮಾರಿಗೆ ಭತ್ಯಾಸ್ ಬಳಿ ದುರಂತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳದಲ್ಲೇ ಒಬ್ಬ ಮಹಿಳೆ ಮೃತಪಟ್ಟಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಅನಂತ್ ಅಂಬಾನಿ ಮದುವೆ ಸಮಾರಂಭದಲ್ಲಿ ದೀದಿ – ಹರಿದು ಬಂತು ರಾಜಕೀಯ ನಾಯಕರ ದಂಡು!
ಘಟನೆಯಲ್ಲಿ 9 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಭಾರತೀಯ ಸೇನೆ ಮತ್ತು ಸ್ಥಳೀಯರ ನೆರವಿನಿಂದ ಗಾಯಾಳುಗಳಿಗೆ ದೋಡಾದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಹಿಮಾಚಲದಲ್ಲಿ ಆರ್ಥಿಕ ಸಂಕಷ್ಟ – ತೆರಿಗೆ ಪಾವತಿಸೋ ಮಂದಿಗೆ ಉಚಿತ ವಿದ್ಯುತ್ ಕಟ್