ರಾಯಚೂರು: ಜಿಲ್ಲೆಯ ದೇವದುರ್ಗ (Devadurga) ಪಟ್ಟಣದ ಹೊಸ ಬಸ್ ನಿಲ್ದಾಣ ಬಳಿ ಕಟ್ಟಡದ ಮೇಲ್ಛಾವಣಿ ಕುಸಿದು ಬಿದ್ದು ಇಬ್ಬರು ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿವೆ. ಇನ್ನೂ ನಾಲ್ಕು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಕಟ್ಟಡದ ಅವಶೇಷದಡಿ ಸಿಲುಕಿ ರವಿಚಂದ್ರ (35) ಹಾಗೂ ನಾಗರಾಜ (30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಾವೇ ನಿರ್ಮಿಸಿದ್ದ ಕಿರುಚಿತ್ರದ ಪೋಸ್ಟರ್ ಅಂಟಿಸಲು ಹೋಗಿದ್ದ ವೇಳೆ ಅವಘಡ ನಡೆದಿದೆ. ಮೇಲ್ಛಾವಣಿಯ ಸಜ್ಜಾ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನ ದೇವದುರ್ಗ ತಾಲೂಕಾಸ್ಪತ್ರೆ ಹಾಗೂ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: 2028ಕ್ಕೆ ಕರ್ನಾಟಕದಲ್ಲಿ, 2029ಕ್ಕೆ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ: ಡಿ.ಕೆ. ಶಿವಕುಮಾರ್
ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಏಕಾಏಕಿ ಸಿಮೆಂಟ್ ಕಳಚಿ ಬಿದ್ದಿದ್ದರಿಂದ ಅವಘಡ ಉಂಟಾಗಿದೆ. ಘಟನೆ ಸಂಬಂಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಫ್ರಾನ್ಸ್‌ನಲ್ಲಿ ಸಣ್ಣ ವಿಮಾನ ಪತನ – 11 ಮಂದಿ ಸಾವು
