ದಾವಣಗೆರೆ: ತಾಲೂಕಿನ ಕೈದಾಳೆ-ಕುಕ್ಕುವಾಡ ಕ್ರಾಸ್ ಬಳಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕರೆಕಟ್ಟೆ ಗ್ರಾಮದ ಯೂಸುಫ್ ಖಾನ್ (33), ಹೊಸ ಬೆಳವನೂರು ಗ್ರಾಮದ ಅಣ್ಣಪ್ಪ (43) ಮೃತರು. ದಾವಣಗೆರೆ ಕಡೆಯಿಂದ ಬರುತ್ತಿದ್ದ ಯೂಸುಫ್ ಖಾನ್, ಚನ್ನಗಿರಿ ಕಡೆಯಿಂದ ಬರುತ್ತಿದ್ದ ಅಣ್ಣಪ್ಪ ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿತ್ತು. ಇದನ್ನೂ ಓದಿ: ಕುಡಿಯಲು ನೀರು ಕೊಡಲ್ಲ ಎಂದಿದ್ದಕ್ಕೆ ಗಲಾಟೆ – ಚಾಕು ಇರಿದು ಲಾರಿ ಕ್ಲೀನರ್ ಹತ್ಯೆ
ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ಮಗುವಿಗೆ ಔಷಧಿ ತರಲು ಯೂಸುಫ್ ಖಾನ್ ಬೈಕ್‌ನಲ್ಲಿ ತೆರಳುತ್ತಿದ್ದರು. ದಾವಣಗೆರೆಗೆ ಹೋಗಿ ಔಷಧಿ ತರುವಾಗ ಎದುರಿಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹದಡಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

