– ಹೋಟೆಲ್ ಕಾರ್ಮಿಕ ಹೃದಯಾಘಾತಕ್ಕೆ ಬಲಿ
ಚಿಕ್ಕಮಗಳೂರು: ವ್ಯಕ್ತಿಯೊಬ್ಬರು ಮೆಡಿಕಲ್‍ನಲ್ಲಿ ಮಾತ್ರೆ ಖರೀದಿಸಿ, ಅಲ್ಲೇ ನೀರು ತೆಗೆದುಕೊಂಡು ಮಾತ್ರೆ ಸೇವಿಸುವಾಗ ಹೃದಯಾಘಾತದಿಂದ (Heart Attack) ಸಾವಿಗೀಡಾದ ಘಟನೆ ಚಿಕ್ಕಮಗಳೂರು (Chikkamagaluru) ನಗರದಲ್ಲಿ ನಡೆದಿದೆ.
ಮೃತರನ್ನು ವಿಶ್ವನಾಥ್ (65) ಎಂದು ಗುರುತಿಸಲಾಗಿದೆ. ಜೂ.26 ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮಾತ್ರೆ ತೆಗೆದುಕೊಂಡು ನೀರು ಕುಡಿಯುವಾಗಲೇ ಹೃದಯಾಘಾತವಾಗಿದೆ. ಈ ವೇಳೆ ಕುಸಿದು ಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಶ್ರೀ ರಾಮಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಕೇಸ್ – ಹುಕ್ಕೇರಿ ಪಿಎಸ್‌ಐ ಅಮಾನತು
ಮತ್ತೊಂದು ಪ್ರಕರಣದಲ್ಲಿ ಹೋಟೆಲ್ ಕಾರ್ಮಿಕರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಬಳ್ಳಾರಿ ಮೂಲದ ಮಹೇಶ್ (45) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. 2 ವರ್ಷಗಳಿಂದ ಬಣಕಲ್ ಹೋಟೆಲ್ ಒಂದರಲ್ಲಿ ಅವರು ಕೆಲಸ ಮಾಡುತ್ತಿದ್ದರು. ಜೂ.25ರ ಬೆಳಗ್ಗೆ ಅವರಿಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ. ಇದನ್ನೂ ಓದಿ: Tamil Nadu Custodial Death | ಕೊಲೆಗಾರರು ಹೀಗೆ ದಾಳಿ ಮಾಡಲ್ಲ – ಹೈಕೋರ್ಟ್ ಛೀಮಾರಿ; ಐವರು ಪೊಲೀಸರು ಅರೆಸ್ಟ್