ಚೆನ್ನೈ: ಚಿತಿರೈ ಹಬ್ಬದ ಆಚರಣೆ ವೇಳೆ ಕಾಲ್ತುಳಿತ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ.
ಘಟನೆಯಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ 5 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಸಣ್ಣಪುಟ್ಟ ಗಾಯಗಳಾಗಿರುವವರಿಗೆ ತಲಾ 1 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸಿಎಂ ಪರಿಹಾರ ನಿಧಿಯಿಂದ ಹಣ ಬಿಡುಗಡೆ ಮಾಡಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ತಿಳಿಸಿದ್ದಾರೆ. ಇದನ್ನೂ ಓದಿ: ಔಷಧಿ ಗುಣಗಳಿರುವ ಏಲಕ್ಕಿ ಸೇವನೆಯಿಂದ ಸಿಗುತ್ತೆ ಈ ಪ್ರಯೋಜನ!
ಕಳೆದ ಎರಡು ವರ್ಷಗಳಿಂದ ಕೋವಿಡ್-19 ಇದ್ದಿದ್ದರಿಂದ ತಮಿಳುನಾಡಿನ ಅತ್ಯಂತ ಪ್ರಸಿದ್ಧ ಚಿತಿರೈ ಹಬ್ಬವನ್ನು ಸಾರ್ವಜನಿಕವಾಗಿ ನಡೆಸಲಾಗಲಿಲ್ಲ. ಆದರೆ ಈ ವರ್ಷ ಕೋವಿಡ್-19 ನಿಯಮಗಳನ್ನು ಸಡಿಲಗೊಳಿಸಿದ್ದರಿಂದ, ಉತ್ಸವವನ್ನು ಅದ್ದೂರಿಯಾಗಿ ನಡೆಸಲಾಯಿತು. ಏಪ್ರಿಲ್ 12 ರಂದು ಪ್ರಾರಂಭವಾದ ಉತ್ಸವವನ್ನು ವೀಕ್ಷಿಸಲಿ ರಾಜ್ಯದ ವಿವಿಧ ಮೂಲೆಗಳಿಂದ ಮಧುರೈ ನಗರಕ್ಕೆ ಜನ ಜಮಾಯಿಸುತ್ತಿದ್ದಾರೆ. ಇದನ್ನೂ ಓದಿ: ಹನುಮ ಜಯಂತಿ ಹಿನ್ನೆಲೆ ಕೇಸರಿ ಶಾಲು ಧರಿಸಿ ಗಣೇಶ್ ಹುಕ್ಕೇರಿ ಪಾದಯಾತ್ರೆ
ಸದ್ಯ ಇಂದು ಬೆಳಗ್ಗೆ ಆಚರಣೆಯ ಸಂದರ್ಭದಲ್ಲಿ, ಜನಸಂದಣಿಯಿಂದಾಗಿ ನೂಕುನುಗ್ಗಲು ಉಂಟಾಗಿದ್ದು, 60 ವರ್ಷದ ಮಹಿಳೆ ಮತ್ತು 40 ವರ್ಷದ ಪುರುಷ ಸಾವನ್ನಪ್ಪಿದ್ದಾರೆ. ಉಳಿದಂತೆ 24 ಜನರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಮಧುರೈನ ಸರ್ಕಾರಿ ರಾಜಾಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. 24 ಮಂದಿಯಲ್ಲಿ ಐವರಿಗೆ ಗಂಭೀರವಾಗಿ ಗಾಯಗಳಾಗಿದೆ.