ರಾಮನಗರ: ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲೂಕಿನ ಚಂದೂರಾಯನಹಳ್ಳಿ ಬಳಿ ನಡೆದಿದೆ.
ಶಂಕರ್ (32), ಮೋಹಿತ್ (17) ಮೃತ ಯುವಕರು. ತಾಲೂಕಿನ ಸಿದ್ದರಂಗಯ್ಯನ ಪಾಳ್ಯದ ನಿವಾಸಿಗಳಾದ ಯುವಕರು, ಇಂದು ಮಧ್ಯಾಹ್ನ ಕೃಷಿ ಹೊಂಡದಲ್ಲಿ ಮೀನು ಹಿಡಿಯಲು ಹೋಗಿದ್ದರು. ಮೀನು ಹಿಡಿಯುವ ವೇಳೆ ಓರ್ವ ನೀರಿನಲ್ಲಿ ಮುಳುಗಿದ್ದು, ಆತನನ್ನು ರಕ್ಷಣೆ ಮಾಡಲು ಹೋದ ಮತ್ತೋರ್ವ ಕೂಡಾ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ
ಸ್ಥಳಕ್ಕೆ ಮಾಗಡಿ ಪೊಲೀಸರು ಭೇಟಿ ನೀಡಿ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದ್ದು, ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

