ಮಂಗಳೂರು: ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ದಕ್ಷಿಣ ಕನ್ನಡದ ಕೊಕ್ರಾಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಪುರುಷಗುಡ್ಡೆ ಎಂಬಲ್ಲಿ ಅವಘಡ ಸಂಭವಿಸಿದೆ. ಬೈಕ್ ಸವಾರ ಸ್ಥಳೀಯ ನಿವಾಸಿ ಪ್ರಶಾಂತ್ ಹಾಗೂ ಸಹಸವಾರ ಬೆಳ್ಮಣ್ ನಿವಾಸಿ ದಿನೇಶ್ ಮೃತಪಟ್ಟವರು.
ಅತಿವೇಗದಲ್ಲಿದ್ದ ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾಗಿರೋ ಶಂಕೆ ವ್ಯಕ್ತವಾಗಿದೆ. ಅಪಘಾತದ ರಭಸಕ್ಕೆ ಸ್ಥಳದಲ್ಲೇ ಯುವಕರು ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ವೇಣೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.