ಕೋಲಾರ: ಆನೆ ದಾಳಿಗೆ (Elephant Attack) ಇಬ್ಬರು ಮೃತಪಟ್ಟಿರುವ ಘಟನೆ ಕೋಲಾರ (Kolar) ಹಾಗೂ ಆಂಧ್ರದ ಗಡಿ ಭಾಗದ ಚಿತ್ತೂರಲ್ಲಿ ಶುಕ್ರವಾರ ನಡೆದಿದೆ.
ಆಂಧ್ರಪ್ರದೇಶಕ್ಕೆ (Andhra Pradesh) ಸೇರಿರುವ ಚಿತ್ತೂರಿನ ಪತಿಚೇನು ಗ್ರಾಮದ ಓರ್ವ ಮಹಿಳೆ ಹಾಗೂ ಸಪ್ಪನಿಕುಂಟಾ ಗ್ರಾಮದ ವ್ಯಕ್ತಿಯ ಮೇಲೆ ಆನೆ ದಾಳಿ ನಡೆಸಿದೆ. ದಾಳಿಗೆ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗ್ರಾಮದಲ್ಲಿ ಆನೆಗಳ ಹಾವಳಿ ಹೆಚ್ಚಾಗಿದ್ದು ಘಟನೆಯಿಂದ ಗ್ರಾಮದ ಜನರಲ್ಲಿ ಆತಂಕ ಮನೆ ಮಾಡಿದೆ. ಇದನ್ನೂ ಓದಿ: ನಕ್ಸಲ್ ದಂಪತಿ ಮಗಳು 10 ನೇ ತರಗತಿ ಪಾಸ್; ಅಪ್ಪ-ಅಮ್ಮನ ಥರ ಆಗಲ್ಲ, ಡಾಕ್ಟರ್ ಆಗ್ತೀನಿ ಅಂದ್ಳು ಬಾಲಕಿ
Advertisement
Advertisement
ಅರಣ್ಯ ಇಲಾಖೆಗೆ (Forest Department) ಆನೆಗಳ ಹಾವಳಿಯ ಬಗ್ಗೆ ಮಾಹಿತಿ ನೀಡಲಾಗಿದೆ. ಆದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ. ಆನೆಗಳ ಉಪಟಳದಿಂದಾಗಿ ಗಡಿ ಭಾಗದ ಎರಡು ರಾಜ್ಯಗಳ ಜನ ಕಂಗಾಲಾಗಿದ್ದಾರೆ. ಈ ಬಗ್ಗೆ ಇಲಾಖೆ ಸೂಕ್ತ ಕ್ರಮ ಕೈಗೊಂಡು ಆನೆಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಗಡಿ ಭಾಗದ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಪೊಲೀಸ್ ಠಾಣೆಯ ಕುರ್ಚಿಯಲ್ಲೇ ರಾಜಾರೋಷವಾಗಿ ಕುಳಿತು ಮದ್ಯಪಾನ- ವ್ಯಕ್ತಿ ಅರೆಸ್ಟ್