ಚಾಮರಾಜನಗರ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟಾಟಾ ಏಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸಿದ್ದಯ್ಯನಪುರ ಬಳಿ ನಡೆದಿದೆ.
ಕೊಳ್ಳೇಗಾಲ ತಾಲೂಕಿನ ಬಾಣೂರು ಗ್ರಾಮದ ರಾಜಮ್ಮ (50), ಶೃತಿ (28) ಮೃತರು. ಕೊಳ್ಳೇಗಾಲದಲ್ಲಿ ತಿಥಿ ಕಾರ್ಯಕ್ಕೆ ಬಂದು ವಾಪಾಸ್ ಆಗುವಾಗ ಅವಘಡ ಸಂಭವಿಸಿದೆ.
- Advertisement -
ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ಮೃತದೇಹಗಳನ್ನು ರವಾನಿಸಲಾಗಿದೆ.
- Advertisement -
ಗಾಯಾಳುಗಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ಸಿಮ್ಸ್, ಮೈಸೂರಿಗೆ ಸಿಬ್ಬಂದಿ ಕರೆದುಕೊಂಡು ಹೋಗಿದ್ದಾರೆ.