ಚಾಮರಾಜನಗರ: ಮರಕ್ಕೆ ಕಾರು ಡಿಕ್ಕಿ ಹೊಡೆದು ಇಬ್ಬರು ದಾರುಣ ಸಾವಿಗೀಡಾದ ಘಟನೆ ಪುಣಜನೂರು ಚೆಕ್‌ಪೋಸ್ಟ್ ಬಳಿ ನಡೆದಿದೆ.
ಮೈಸೂರು ಮೂಲದ ನಂದನ್ (24), ಜೀವನ್ (25) ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುಂಡ್ಲುಪೇಟೆಯ ಸುನೀಲ್, ಮೈಸೂರಿನ ಶಶಾಂಕ್, ಧನುಷ್ ಗಾಯಗೊಂಡವರಾಗಿದ್ದಾರೆ. ಕಾರು ಅಡ್ಡಾದಿಡ್ಡಿ ಚಲಾಯಿಸಿ ಮರಕ್ಕೆ ಕಾರು ಗುದ್ದಿ ಅವಘಡ ಸಂಭವಿಸಿದೆ. ಚಾಮರಾಜನಗರ ಪೂರ್ವ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.