ಬಳ್ಳಾರಿ: ರಸ್ತೆ ಪಕ್ಕದ ಮರಕ್ಕೆ ಕಾರು (Car) ಡಿಕ್ಕಿ ಹೊಡೆದ ಪರಿಣಾಮ ಬಳ್ಳಾರಿ ಬಿಮ್ಸ್ (BIMS) ಆಸ್ಪತ್ರೆಯ ಇಬ್ಬರು ವೈದ್ಯರು ಹಾಗೂ ಓರ್ವ ವಕೀಲ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಆಂಧ್ರ ಗಡಿಭಾಗದ ವಿಡಪನಕಲ್ (Vidapanakal) ಬಳಿ ನಡೆದಿದೆ.
ಡಾ.ಗೋವಿಂದರಾಜುಲು, ಡಾ.ಯೋಗೇಶ್ ಮತ್ತು ವಕೀಲ ವೆಂಕಟನಾಯ್ಡು (55) ಮೃತ ದುರ್ದೈವಿಗಳು. ಘಟನೆಯಲ್ಲಿ ಮತ್ತೋರ್ವ ಖಾಸಗಿ ಆಸ್ಪತ್ರೆ ವೈದ್ಯ ಅಮರೇಗೌಡ ಪಾಟೀಲ್ ಸ್ಥಿತಿ ಗಂಭೀರವಾಗಿದೆ. ವಿದೇಶಿ ಪ್ರವಾಸಕ್ಕೆ ತೆರಳಿದ್ದ ಸ್ನೇಹಿತರು ಬಳ್ಳಾರಿಗೆ ವಾಪಸ್ಸಾಗುತ್ತಿದ್ದ ವೇಳೆ ಘಟನೆ ನಡೆದಿದೆ. ಇದನ್ನೂ ಓದಿ: ನ್ಯೂಇಯರ್‌ಗೆ ಪೊಲೀಸರು ಅಲರ್ಟ್; ರೆಸಾರ್ಟ್, ಏರ್ಪೋರ್ಟ್, ರೈಲ್ವೆ ನಿಲ್ದಾಣಗಳ ಮೇಲೆ ಹದ್ದಿನ ಕಣ್ಣು
ಬೆಂಗಳೂರು ವಿಮಾನ ನಿಲ್ದಾಣದಿಂದ ಅನಂತಪುರ ಮಾರ್ಗವಾಗಿ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಬೆಳಗಿನ ಜಾವ ನಿದ್ದೆ ಮಂಪರಿನಲ್ಲಿ ಅಪಘಾತ ಸಂಭವಿಸಿರಬಹುದು ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಇದನ್ನೂ ಓದಿ: Bengaluru| ಸಿಲಿಂಡರ್ ಸ್ಫೋಟಗೊಂಡು 3 ಮನೆಗಳಿಗೆ ಬೆಂಕಿ – ಒಂದೇ ಕುಟುಂಬದ ನಾಲ್ವರಿಗೆ ಗಾಯ