ಹಾವೇರಿ: ಮಹೀಂದ್ರಾ ಕ್ವಾಂಟೋ ಕಾರು ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡ ಘಟನೆ ಜಿಲ್ಲೆಯ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ನಿತಿನ್(22) ಮತ್ತು ಅರ್ಜುನ್(22) ಮೃತ ದುರ್ದೈವಿಗಳು. ಮೃತ ನಿತಿನ್ ಹರಿಹರ ಮೂಲದವನಾಗಿದ್ದು, ಅರ್ಜುನ್ ಬೆಂಗಳೂರು ನಿವಾಸಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡಿದ್ದವರನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Advertisement
ನಿತಿನ್ ಮತ್ತು ಅರ್ಜುನ್ ಎಂಜಿನಿಯರ್ ಓದುತ್ತಿದ್ದ ವಿದ್ಯಾರ್ಥಿಗಳಾಗಿದ್ದು, ರಜೆ ಇದ್ದ ಕಾರಣ ಗೋವಾ ಪ್ರವಾಸಕ್ಕೆ ಹೋಗಿದ್ದರು. ಪ್ರವಾಸ ಮುಗಿಸಿ ಬೆಂಗಳೂರಿಗೆ ಹೊರಟ್ಟಿದ್ದರು. ಕಾರು ವೇಗದಲ್ಲಿ ಸಂಚರಿಸುತ್ತಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಪಲ್ಟಿಯಾಗಿದೆ. ಪರಿಣಾಮ ನಿತಿನ್ ಮತ್ತು ಅರ್ಜುನ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
Advertisement
ಈ ಬಗ್ಗೆ ಮಾಹಿತಿ ತಿಳಿದ ಹಾವೇರಿ ನಗರ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾವೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv