ಚಿಕ್ಕಮಗಳೂರು: ಕಾಡಾನೆ ದಾಳಿಗೆ ಇಬ್ಬರು ರೈತರು (Farmers) ಬಲಿಯಾದ ಘಟನೆ ಶೃಂಗೇರಿ (Sringeri) ತಾಲೂಕಿನ ಕೆರೆಮನೆ ಗ್ರಾಮದಲ್ಲಿ ನಡೆದಿದೆ.
ಸಾವಿಗೀಡಾದ ರೈತರನ್ನು ಹರೀಶ್ (44) ಮತ್ತು ಉಮೇಶ್ (40) ಎಂದು ಗುರುತಿಸಲಾಗಿದೆ. ಇಬ್ಬರು ಸೇರಿ ಕೊಟ್ಟಿಗೆಗೆ ಸೊಪ್ಪು ತರಲು ಹೋಗಿದ್ದರು. ಈ ವೇಳೆ ಆನೆ ದಾಳಿ ನಡೆಸಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇದನ್ನೂ ಓದಿ: ಬಂಡೀಪುರ | ಸಫಾರಿ ವಾಹನವನ್ನು ಅಟ್ಟಾಡಿಸಿದ ಕಾಡಾನೆ – ವೀಡಿಯೋ ವೈರಲ್
ಶೃಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಶೃಂಗೇರಿ ಪೊಲೀಸರು, ಅರಣ್ಯ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಗ್ರಾಮಸ್ಥರು, ಕಾಡಾನೆ ಹಾವಳಿಯಿಂದ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕಾಡಾನೆಗಳನ್ನು ಹಿಮ್ಮೆಟ್ಟಿಸಲು ಹೊಸ ಪ್ರಯೋಗ – ಫಾರ್ಮ್ ಗಾರ್ಡ್ ಡಿವೈಸ್ ಮೂಲಕ ಅರಣ್ಯ ಇಲಾಖೆ ಕಾರ್ಯಾಚರಣೆ
 


 
		 
		 
		 
		 
		
 
		 
		 
		 
		