ಚಾಮರಾಜನಗರ: ವಿದ್ಯಾರ್ಥಿಗಳಲ್ಲಿನ ಪರೀಕ್ಷಾ ಭಯ ಹೋಗಲಾಡಿಸಲು ಹಾಗೂ ಪರೀಕ್ಷಾ ಸಮಯದಲ್ಲಿ ಹೇಗೆಲ್ಲಾ ತಯಾರಿ ನಡೆಸಬೇಕು? ಯಾವ ರೀತಿ ಪರೀಕ್ಷೆಗೆ ಸಿದ್ಧರಾಗಬೇಕು ಎಂಬುದರ ಬಗ್ಗೆ ಸ್ಪತ: ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಆಯ್ದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಜನವರಿ 20ರಂದು ನವದೆಹಲಿಯಲ್ಲಿ ನಡೆಯುಲಿರುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಗಡಿ ಜಿಲ್ಲೆ ಚಾಮರಾಜನಗರದಿಂದ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಪರೀಕ್ಷೆ ಬಂತೆಂದೆರೆ ಸಾಕು ವಿದ್ಯಾರ್ಥಿಗಲ್ಲಿ ಆತಂಕ ಮನೆ ಮಾಡುತ್ತದೆ. ಪರೀಕ್ಷಾ ಭಯ ಇನ್ನಿಲ್ಲದಂತೆ ಅವರನ್ನು ಕಾಡುತ್ತದೆ. ಇದರಿಂದ ಎಷ್ಟೋ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಸಮಪರ್ಕವಾಗಿ ಎದುರಿಸಲಾಗದೆ ಫೇಲ್ ಆಗುವುದು ಸಾಮಾನ್ಯವಾಗಿದೆ. ಕಡಿಮೆ ಅಂಕಗಳಿಸಿ ಖಿನ್ನತೆಗೆ ಗುರಿಯಾಗುತ್ತಾರೆ. ಇದೆನ್ನೆಲ್ಲಾ ಗಮನದಲ್ಲಿಟ್ಟುಕೊಂಡು ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಆಯ್ದ ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಪೇ ಚರ್ಚಾ ಎಂಬ ಕಾರ್ಯಕ್ರಮ ನಡೆಸುತ್ತಿದ್ದು, ಈ ಬಾರಿ ಚಾಮರಾಜನಗರ ಜಿಲ್ಲೆಯಿಂದ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
Advertisement
Advertisement
ಸ್ವತ: ಮೋದಿಯವರೇ ನೇರವಾಗಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳ ಬಯಸುವ ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ ಒಂದು ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿತ್ತು. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿರುವ ಆದರ್ಶ ವಿದ್ಯಾಲಯದ ಹತ್ತನೇ ತರಗತಿ ವಿದ್ಯಾರ್ಥಿನಿ ಅಪೂರ್ವ ಹಾಗೂ ಯಳಂದೂರಿನಲ್ಲಿರುವ ಆದರ್ಶ ವಿದ್ಯಾಲಯದ ಹತ್ತನೇ ತರಗತಿ ವಿದ್ಯಾರ್ಥಿ ಅರ್ಫತ್ ಪ್ರಬಂಧ ಬರೆದು ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ. ಸ್ವತ: ಮೋದಿ ಅವರೊಡನೆ ಸಂವಾದ ನಡೆಸಲು ಖುಷಿಯಾಗುತ್ತಿದೆ ಎನ್ನುವ ಯಳಂದೂರಿನ ಅರ್ಫತ್, ದೇಶದ ಎಲ್ಲಾ ರಾಜ್ಯಗಳಲ್ಲು ಪ್ರಾಥಮಿಕ ಹಂತದಿಂದಲೇ ಏಕರೂಪ ಶಿಕ್ಷಣ ಪದ್ದತಿ ಜಾರಿಗೆ ತರುವಂತೆ ಪ್ರಧಾನಿ ಮೋದಿ ಅವರಲ್ಲಿ ಮನವಿ ಮಾಡುವುದಾಗಿ ಹೇಳುತ್ತಾನೆ.
Advertisement
Advertisement
ಸಂವಾದ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದರೂ ಅನಾರೋಗ್ಯ ಕಾರಣದಿಂದ ಭಾಗವಹಿಸಲು ಹಿಂಜರಿದಿದ್ದ ಗುಂಡ್ಲುಪೇಟೆ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ಅಪೂರ್ವ ಇದೀಗ ತನ್ನ ನಿರ್ಧಾರ ಬದಲಿಸಿದ್ದಾಳೆ. ಪ್ರಧಾನಿಯವರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲು ಎಲ್ಲರಿಗೂ ಅವಕಾಶ ಸಿಗುವುದಿಲ್ಲ. ಹಾಗಾಗಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುತ್ತೇನೆ ಎನ್ನುವ ಅಪೂರ್ವ ವಿದ್ಯಾರ್ಥಿಗಳಲ್ಲಿ ಕೃಷಿ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿದೆ. ಹಾಗಾಗಿ ಶಿಕ್ಷಣದಲ್ಲಿ ಕೃಷಿಗೆ ಆದ್ಯತೆ ನೀಡುವಂತೆ ಪ್ರಧಾನಿ ಮೋದಿ ಅವರ ಗಮನ ಸೆಳೆಯುವುದಾಗಿ ಆಯ್ಕೆಯಾದ ಶಾಲಾ ವಿಧ್ಯಾರ್ಥಿ ಅಪೂರ್ವ ಮಾತು.
ಜನವರಿ 20 ರಂದು ನವದೆಹಲಿಯಲ್ಲಿ ನಡೆಯುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಹಿಂದುಳಿದ ಚಾಮರಾಜನಗರ ಜಿಲ್ಲೆಯಿಂದ ಇಬ್ಬರು ಪ್ರತಿಭಾವಂತ ವಿದ್ಯಾರ್ಥಿಗಳು ಆಯ್ಕೆಯಾಗಿರುವುದು ಇತರ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಿದೆ.