ಪುಣೆ: ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಕಾಮುಕರಿಬ್ಬರು ಅತ್ಯಾಚಾರ ಎಸಗಿದ್ದರಿಂದ ಓರ್ವ ಬಾಲಕಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಹಿಂಜ್ವಾಡಿಯಲ್ಲಿ ನಡೆದಿದೆ.
ಇಬ್ಬರು ಬಾಲಕಿಯರು 12 ವರ್ಷದವರಾಗಿದ್ದು, ಭಾನುವಾರ ಮಧ್ಯಾಹ್ನ ಇಬ್ಬರೂ ಮನೆಯಿಂದ ಸ್ವಲ್ಪ ದೂರದಲ್ಲಿದ್ದ ದೇಗುಲದ ಬಳಿ ಆಟವಾಡಲು ತೆರಳಿದ್ದರು. ಈ ವೇಳೆ ಅದೇ ಪ್ರದೇಶದಲ್ಲಿ ವಾಸಿಸುತ್ತಿದ್ದ ಇಬ್ಬರು ಕಾಮುಕರು ಬಂದು ಬಾಲಕಿಯರಿಗೆ ಚಾಕ್ಲೇಟ್ ಕೊಡಿಸುವುದಾಗಿ ಆಸೆ ತೋರಿಸಿ ಕರೆದುಕೊಂಡು ಹೋಗಿದ್ದಾರೆ. ಬಳಿಕ ಬಾಲಕಿಯರನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಕಾಮುಕರು ಅತ್ಯಾಚಾರ ಎಸಗಿದ್ದಾರೆ ಎಂದು ಹಿಂಜ್ವಾಡಿ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
Advertisement
Advertisement
ಅತ್ಯಾಚಾರ ಎಸಗಿದ ಬಳಿಕ ಇಬ್ಬರು ಬಾಲಕಿಯರಿಗೆ ಯಾರಿಗೂ ಈ ಬಗ್ಗೆ ಹೇಳಬಾರದು ಎಂದು ಬೆದರಿಕೆ ಒಡ್ಡಿದ್ದಾರೆ. ಅದರಂತೆಯೇ ಬಾಲಕಿಯರು ಈ ಬಗ್ಗೆ ಮನೆಯಲ್ಲಿ ಹೇಳಲಿಲ್ಲ. ಆದರೆ ಅತ್ಯಾಚಾರಕ್ಕೊಳಗಾದ ಇಬ್ಬರು ಬಾಲಕಿಯರಲ್ಲಿ ಓರ್ವ ಬಾಲಕಿ ತೀವ್ರ ನೋವು ಹಾಗೂ ನಿಶಕ್ತಿಯಿಂದ ಬಳಲುತ್ತಿದ್ದು, ಕೂಡಲೇ ಪೋಷಕರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
Advertisement
ಆಸ್ಪತ್ರೆಯಲ್ಲಿ ವೈದ್ಯರಿಗೆ ಬಾಲಕಿ ಅಘಾತಕ್ಕೊಳಗಾಗಿರುವುದು ತಿಳಿದು ಬಂದಿದೆ. ನಂತರ ಅವರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದು, ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಆದರೆ ಬಾಲಕಿ ಮಾತನಾಡುವ ಸ್ಥಿತಿಯಲ್ಲಿರಲಿಲ್ಲ. ಈ ವೇಳೆ ಕುಟುಂಬಸ್ಥರು ತಮ್ಮ ಮಗಳೊಂದಿಗೆ ನೆರೆ ಮನೆಯ ಬಾಲಕಿ ಕೂಡ ಹೋಗಿದ್ದಳು ಎಂದು ಹೇಳಿದ್ದಾರೆ. ಪೊಲೀಸರು ಆ ಬಾಲಕಿಯನ್ನು ವಿಚಾರಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ.
Advertisement
Pune: Two minor girls allegedly raped by two men in Hinjawadi on September 16 who lured them with chocolates into a forest, one of the victims died during treatment yesterday. FIR registered, two accused (one minor) arrested (pic 1). Police investigating at the spot. #Maharashtra pic.twitter.com/lX89jDkJif
— ANI (@ANI) September 20, 2018
ಸಂತ್ರಸ್ತೆಯ ಆರೋಗ್ಯ ಸ್ಥಿತಿ ಗಂಭೀರವಾದ ಬಳಿಕ ಆಕೆಯನ್ನು ಪುಣೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಬಾಲಕಿ ಕೋಮ ಸ್ಥಿತಿಗೆ ತಲುಪಿದ್ದಳು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಮೃತ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಬಾಲಕಿಯ ಹೇಳಿಕೆಯ ಮೇರೆಗೆ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇಬ್ಬರ ಪೈಕಿ ಓಬ್ಬ ಅಪ್ರಾಪ್ತನಾಗಿದ್ದು, ಮತ್ತೊಬ್ಬನನ್ನು ಗಣೇಶ್ ನಿಕಾಮ್ (22) ಎಂದು ಗುರುತಿಸಲಾಗಿದೆ.
ಸದ್ಯಕ್ಕೆ ವೈದ್ಯಕೀಯ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ. ಈಗಾಗಲೇ ನಾವು ಆರೋಪಿ ಗಣೇಶ್ ನಿಕಮ್ ನನ್ನು ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು. ಮತ್ತೊಬ್ಬ ಆರೋಪಿ ಅಪ್ರಾಪ್ತನಾಗಿರುವ ಕಾರಣ ಆತನನ್ನು ರಿಮ್ಯಾಂಡ್ ಹೋಮ್ ಗೆ ಕಳುಹಿಸಲಾಗಿದೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ), 363 (ಅಪಹರಣ) ಮತ್ತು ಪೋಕ್ಸೋ ಕಾಯ್ದೆಯಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv