ಮಂಗಳೂರು: ಭಿನ್ನಮತೀಯ ಜೋಡಿ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಕ್ಕೆ ಹಿಂದೂಪರ ಸಂಘಟನೆಯ ಸದಸ್ಯರು ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ಅವರಿಗೆ ಮುತ್ತಿಗೆ ಹಾಕಿದ್ದಾರೆ.
ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಅರಣ್ಯ ಪ್ರದೇಶದಲ್ಲಿ ಭಿನ್ನಮತೀಯ ಜೋಡಿ ಪತ್ತೆಯಾಗಿತ್ತು. ವೀಡಿಯೋ ವೈರಲ್ ಆದ ಬೆನ್ನಲ್ಲೇ ಯುವಕ ಹಿಂದೂ ಸಂಘಟನೆಯ ಕಾರ್ಯಕರ್ತರ ವಿರುದ್ಧವೇ ಉಪ್ಪಿನಂಗಡಿ ಠಾಣೆಯಲ್ಲಿ ದೂರು ನೀಡಿದ್ದ.
Advertisement
Advertisement
ಆಟೋ ರಿಕ್ಷಾ ತಡೆದು ನಿಲ್ಲಿಸಿ ಹಲ್ಲೆ ನಡೆಸಿರುವುದಾಗಿ ಯುವಕ ದೂರಿನಲ್ಲಿ ಆರೋಪಿಸಿದ್ದ. ಈ ದೂರಿನ ಆಧಾರದ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಪೊಲೀಸರು ಹಿಂದೂಪರ ಸಂಘಟನೆಯ ಇಬ್ಬರು ಸದಸ್ಯರನ್ನು ಪೊಲೀಸರು ಬಂಧಿಸಿದ್ದರು. ಇದನ್ನೂ ಓದಿ: ನಮ್ಮ ತ್ಯಾಗಕ್ಕೆ ಬೆಲೆ ಸಿಗಲಿದೆ, ನಾನು ಕ್ಯಾಬಿನೆಟ್ ಸೇರಲಿದ್ದೇನೆ: ಆರ್.ಶಂಕರ್
Advertisement
ಬಂಧನವನ್ನು ಖಂಡಿಸಿ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಮಂಗಳವಾರ ರಾತ್ರಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಸಂಜೀವ ಮಠಂದೂರು ಅವರಿದ್ದ ಬಸ್ಸನ್ನು ಉಪ್ಪಿನಂಗಡಿಯಲ್ಲಿ ತಡೆದಿದ್ದಾರೆ. ಸಂಜೀವ ಮಠಂದೂರಿಗೆ ಮುತ್ತಿಗೆ ಹಾಕಿದ ಕಾರ್ಯರ್ತರು ಬಂಧನ ಮಾಡಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಮದ್ಯದ ಅಮಲಿನಲ್ಲಿ ಸ್ಕೈವಾಕ್‍ನಿಂದ ಜಿಗಿದ ವ್ಯಕ್ತಿ – ಸೊಂಟಕ್ಕೆ ಗಂಭೀರ ಪೆಟ್ಟು