ಹಾಸನದ ಮಲೆನಾಡು ಭಾಗದಲ್ಲಿ ನಿಲ್ಲದ ಕಾಡಾನೆಗಳ ಉಪಟಳ – ಇಬ್ಬರಿಗೆ ತೀವ್ರ ಗಾಯ

Public TV
1 Min Read
Elephant 768x427 1

ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ (Elephant) ಉಪಟಳ ಮುಂದುವರಿದಿದೆ. ಕಾಡಾನೆ ದಾಳಿಯಿಂದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ ತಾಲೂಕಿನ ಗುಳಗಳಲೆ ಹಾಗೂ ಹೆಬ್ಬನಹಳ್ಳಿ ಗ್ರಾಮಗಳಲ್ಲಿ ನಡೆದಿದೆ.

ಗುಳಗಳಲೆ ಗ್ರಾಮದ ಕುರ್ಚಿ ಕಾಫಿ ಎಸ್ಟೇಟ್ ರೈಟರ್ ಇನಾಯತ್ (45) ಕಾಫಿ ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿದೆ. ಸದ್ಯ ಕೂದಲೆಳೆ ಅಂತರದಲ್ಲಿ ಇನಾಯತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳು ಇನಾಯತ್‌ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹೆಬ್ಬನಹಳ್ಳಿ ಗ್ರಾಮದಲ್ಲಿ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ಕಾರ್ಮಿಕ ಹಬೀದ್ (26) ಮೇಲೆ ಒಂಟಿಸಲಗ ಏಕಾಏಕಿ ದಾಳಿ ನಡೆಸಿದೆ. ಸಲಗದಿಂದ ತಪ್ಪಿಸಿಕೊಂಡಿರುವ ಹಬೀದ್‌ಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: 42 ಕಡೆ 5 ಸಾವಿರಕ್ಕೂ ಕಡಿಮೆ ಅಂತರದ ಗೆಲುವು – 2023, 2018ರಲ್ಲಿ ಯಾರಿಗೆ ಎಷ್ಟು ಮತ?

ಬೀಟಮ್ಮ ಹೆಸರಿನ ಗುಂಪಿನಲ್ಲಿದ್ದ ಒಂಟಿಸಲಗ ಬೇರ್ಪಟ್ಟು ಸಿಕ್ಕಸಿಕ್ಕವರ ಮೇಲೆ ದಾಳಿ ಮಾಡುತ್ತಿದೆ. ಇದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಜನರು ಎಚ್ಚರಿಕೆಯಿಂದ ಓಡಾಡುವಂತೆ ಅರಣ್ಯ ಇಲಾಖೆ ಸಿಬ್ಬಂದಿ ಮನವಿ ಮಾಡಿದ್ದು, ಕಾಡಾನೆ ಹಾವಳಿಗೆ ಪರಿಹಾರ ಕಂಡುಹಿಡಿಯುವಂತೆ ಮಲೆನಾಡು ಭಾಗದ ಜನರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸಿ.ಟಿ.ರವಿ ಸೋಲಿಗೆ ನಾಲಿಗೆ ಕಾರಣ: ಭೋಜೇಗೌಡ

Share This Article