ಮಂಗಳೂರು: ಥೈಲ್ಯಾಂಡಿನ (Thailand) ಬ್ಯಾಂಕಾಕ್‌ನಲ್ಲಿ (Bangkok) ಇತ್ತೀಚೆಗೆ ನಡೆದ ವಿಶ್ವ ಜಾದೂ ಸಮ್ಮೇಳನದಲ್ಲಿ (World Magic Conference) ಜಾದೂಗಾರ (Magician) ಕುದ್ರೋಳಿ ಗಣೇಶ್ (Ganesh Kudroli) ಅವರು ಪ್ರಸುತ ಪಡಿಸಿದ ತುಳುನಾಡು ತುಡರ್ ಚೆಂಡು ಜಾದೂವಿಗೆ ಎರಡು ಅಂತಾರಾಷ್ಟ್ರೀಯ ಮಟ್ಟದ ಪುರಸ್ಕಾರಗಳು ಲಭಿಸಿದೆ.
ಜಗತ್ತಿನ ಅತ್ಯಂತ ಪುರಾತನ ಜಾದೂ ಆಗಿರುವ ಕಪ್ಸ್ ಆಂಡ್ ಬಾಲ್ಸ್ ಮ್ಯಾಜಿಕ್ ಅನ್ನು ಕುದ್ರೋಳಿ ಗಣೇಶ್ ಅವರು ನೂತನ ತಂತ್ರಗಾರಿಕೆಯ ಮೂಲಕ ತುಳು ಭಾಷೆ ಹಾಗೂ ಪಾಡ್ದನದ ಮೂಲಕ ಪ್ರಸ್ತುತ ಪಡಿಸಿದ ಸೃಜನಶೀಲತೆಯನ್ನು ಪರಿಗಣಿಸಿ ಅತ್ಯಂತ ಹೆಚ್ಚು ಸದಸ್ಯರನ್ನು ಹೊಂದಿರುವ ಜಗತ್ತಿನ ಬೃಹತ್ ಜಾದೂ ಸಂಸ್ಥೆ ಅನ್ನುವ ಹೆಗ್ಗಳಿಕೆ ಹೊಂದಿದ ಅಮೆರಿಕಾದ ಇಂಟರ್ ನ್ಯಾಶನಲ್ ಸೊಸೈಟಿ ಆಫ್ ಮ್ಯಾಜಿಕ್ ಸಂಸ್ಥೆಯು ಪ್ರತಿಷ್ಟಿತ ಮರ್ಲಿನ್ ಮೆಡಲ್ ನೀಡಿ ಗೌರವಿಸಿದೆ. ತುಳುನಾಡು ತುಡರ್ ಚೆಂಡು ಜಾದೂವಿನ ಹೊಸತನವನ್ನು ಗಮನಿಸಿ ವಿಶ್ವ ಜಾದೂ ಸಮ್ಮೇಳನ ಸಂಘಟಿಸಿದ ಥೈಲ್ಯಾಂಡ್ ಇಂಟರ್ ನ್ಯಾಶನಲ್ ಅಕಾಡೆಮಿ ಆಫ್ ಮ್ಯಾಜಿಕ್ ಸಂಸ್ಥೆ ಮೋಸ್ಟ್ ಓರಿಜಿನಲ್ ಆಕ್ಟ್ ಪ್ರಶಸ್ತಿ ನೀಡಿ ಪುರಸ್ಕರಿಸಿದೆ.
Advertisement
Advertisement
ಇಂಟರ್ ನ್ಯಾಶನಲ್ ಸೊಸೈಟಿ ಆಫ್ ಮ್ಯಾಜಿಕ್ ಸಂಸ್ಥೆಯ ಅಧ್ಯಕ್ಷರಾದ ಅಮೆರಿಕಾದ ಜಾದೂಗಾರ ಟೋನಿ ಹಸೀನಿ ಹಾಗೂ ಉಕ್ರೇನಿನ ಜಾದೂಗಾರ ವೊರೋನಿನ್ ಅವರು ಕುದ್ರೋಳಿ ಗಣೇಶ್ ಅವರಿಗೆ ಪುರಸ್ಕಾರ ನೀಡಿ ಗೌರವಿಸಿದರು. ಥೈಲ್ಯಾಂಡ್ ಇಂಟರ್ ನ್ಯಾಶನಲ್ ಅಕಾಡೆಮಿ ಆಫ್ ಮ್ಯಾಜಿಕ್ ಸಂಸ್ಥೆ ಅಧ್ಯಕ್ಷರಾದ ಜಾದೂಗಾರ ಮಮದಾ ಹಾಗೂ ಭಾರತದ ದಿಲ್ಲಿ ಸ್ಕೂಲ್ ಆಫ್ ಮ್ಯಾಜಿಕ್ ಸಂಸ್ಥೆಯ ಅಧ್ಯಕ್ಷರಾದ ಜಾದೂಗಾರ ರಾಜ್ ಕುಮಾರ್ ಉಪಸ್ಥಿತರಿದ್ದರು. ಇದನ್ನೂ ಓದಿ: 10 ಅಡಿ ಸುರಂಗ ಕೊರೆದು ಬ್ಯಾಂಕ್‍ನಲ್ಲಿದ್ದ 1 ಕೋಟಿ ಮೌಲ್ಯದ ಚಿನ್ನಾಭರಣ ಕದ್ದ ಖದೀಮರು
Advertisement
Advertisement
ಹಾಂಗ್ ಕಾಂಗ್ ಜಾದೂಗಾರರಾದ ಅಲ್ಬರ್ಟ್ ಟಾಮ್ ಮತ್ತು ಬಾಂಡ್ ಲೀ, ಇಂಡೋನೇಶಿಯಾದ ಜಾದೂಗಾರ ಹ್ಯಾಂಡಿ, ಸಿಂಗಾಪುರದ ಜಾದೂಗಾರ ಕಸ್ಸಿಡಿ ಲೀ ಮುಂತಾದವರು ಆಯ್ಕೆ ಸಮಿತಿಯಲ್ಲಿದ್ದರು. ಬ್ಯಾಂಕಾಕ್‌ನ ಫ್ಯಾಶನ್ ಐಲ್ಯಾಂಡ್ ಮಾಲ್ ಪ್ರಾಂಗಣದಲ್ಲಿ ನಡೆದ ಐದು ದಿನಗಳ ವಿಶ್ವ ಜಾದೂ ಸಮ್ಮೇಳನದಲ್ಲಿ ಜಗತ್ತಿನ ಹತ್ತಕ್ಕೂ ಹೆಚ್ಚು ದೇಶಗಳ ನೂರಾರು ಜಾದೂಗಾರರು ಭಾಗವಹಿಸಿದ್ದರು. ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಕೋವಿಡ್ ಮಾರ್ಗಸೂಚಿ ಪ್ರಕಟ