ಚಾಮರಾಜನಗರ: ಕಾರು ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿ, ಕೇರಳ ಮೂಲದ ಇಬ್ಬರು ಸಾವನ್ನಪ್ಪಿರುವ ಘಟನೆ ಚಾಮರಾಜನಗರ (Chamarajanagara) ಜಿಲ್ಲೆಯಲ್ಲಿ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ಮಲ್ಲಯ್ಯನಪುರ ಗೇಟ್ ಸಮೀಪ ಭೀಕರ ಅಪಘಾತವಾಗಿದೆ. ಕೇರಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೇರಳ ಮೂಲದ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ.
ಚಾಲಕ ಹಾಗೂ ಮಗುವಿಗೆ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

