ತುಮಕೂರು: ಓವರ್‌ಟೇಕ್ ಮಾಡುವ ವೇಳೆ ಕೆಎಸ್‌ಆರ್‌ಟಿಸಿ (KSRTC) ಹಾಗೂ ಖಾಸಗಿ ಬಸ್ (Private Bus) ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 20 ಮಂದಿ ಸಣ್ಣಪುಟ್ಟ ಗಾಯಗೊಂಡಿರುವ ಘಟನೆ ತುಮಕೂರು (Tumakuru) ಜಿಲ್ಲೆ ಶಿರಾ (Shira) ಬೈಪಾಸ್ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್ ಬಾಗಲಕೋಟೆ ಜಿಲ್ಲೆಯ ಹುನಗುಂದದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಖಾಸಗಿ ಬಸ್ ಹುಬ್ಬಳ್ಳಿ ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಓವರ್‌ಟೇಕ್ ಮಾಡಲು ಹೋಗಿ ಹಿಂಬದಿಯಿಂದ ಖಾಸಗಿ ಬಸ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿದ್ದ 12 ಪ್ರಯಾಣಿಕರು ಹಾಗೂ ಖಾಸಗಿ ಬಸ್‌ನಲ್ಲಿದ್ದ 6 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇದನ್ನೂ ಓದಿ: ಬಳ್ಳಾರಿ ಪಾಲಿಕೆಯ ಕೈ ಸದಸ್ಯನಿಂದ ಹಲ್ಲೆಗೆ ಒಳಗಾದ ಎಂಜಿನಿಯರ್ ಮೇಲೆ ಈಗ ಅಟ್ರಾಸಿಟಿ ಕೇಸ್!
ಘಟನಾ ಸ್ಥಳಕ್ಕೆ ಶಿರಾ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹಗಳನ್ನು ಶಿರಾ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಇಂದು ಬೆಳಗ್ಗೆ 3 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಶಿರಾ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: IPL 2026 | ಗುಜರಾತ್ ಟೈಟಾನ್ಸ್‌ಗೆ ಶಾಕ್ – ಐಪಿಎಲ್‌ನಿಂದ ಹೊರಗುಳಿಯುತ್ತಾರಾ ಕ್ಯಾಪ್ಟನ್ ಗಿಲ್?

