Saturday, 21st July 2018

Recent News

ಕೂಲಿ ಕೆಲಸದವರನ್ನು ಕರೆದುಕೊಂಡು ಹೋಗುತ್ತಿದ್ದ ಲಾರಿ ಮರಕ್ಕೆ ಡಿಕ್ಕಿ- ಇಬ್ಬರ ದುರ್ಮರಣ

ಕೋಲಾರ: ಚಾಲಕನ ನಿಯಂತ್ರಣ ತಪ್ಪಿ ಲಾರಿವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಲಾರಿಯಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರಿಗೆ ಗಾಯಗಳಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಮಾಲೂರು ತಾಲೂಕಿನ ದೊಡ್ಡಕಡತೂರು ಗ್ರಾಮದ ಬಳಿ ಬೆಳಗ್ಗೆ 6.30 ರ ಸುಮಾರಿಗೆ ಈ ಘಟನೆ ನಡೆದಿದೆ. ರಮೇಶ್(28) ಹಾಗೂ ನಾಗರಾಜ್ (30) ಮೃತ ದುರ್ದೈವಿಗಳು. ಗಾಯಾಳುಗಳನ್ನು ಮಾಲೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕೂಲಿ ಕೆಲಸದವರನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

 

 

Leave a Reply

Your email address will not be published. Required fields are marked *