ಚಿತ್ರದುರ್ಗ: ಜಿಲ್ಲೆಯ ದೊಡ್ಡಸಿದ್ದವ್ವನಹಳ್ಳಿ ಗ್ರಾಮ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, (Road Accident) ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಲಾರಿ ಚಾಲಕ ಲಾರಿಯೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ.
ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಬಳಿ ಸಾಗುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಬಳಿಕ ಮತ್ತೊಂದು ಕಾರಿಗೂ ಡಿಕ್ಕಿ ಹೊಡೆದಿರುವುದಾಗಿ ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಉತ್ತರಾಖಂಡದಲ್ಲಿ ಸುರಂಗಕ್ಕೆ ಏಕಾಏಕಿ ನುಗ್ಗಿದ ನೀರು – 7 ಮಂದಿ ಬಲಿ, ಇಬ್ಬರಿಗಾಗಿ ಮುಂದುವರಿದ ಶೋಧಕಾರ್ಯ
ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಅಪಘಾತದ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ತನಿಖೆ ಮುಂದುವರಿದಿದೆ.ಇದನ್ನೂ ಓದಿ: ಸರ್ಪ ಸಂಸ್ಕಾರ – ಯಾಕೆ ಮಾಡಬೇಕು? ಏನಿದರ ಮಹತ್ವ?

