ಬೆಂಗಳೂರು: ಲಾರಿಯೊಂದು ಬೈಕ್‍ಗೆ ಡಿಕ್ಕಿಯಾದ ಪರಿಣಾಮ ಸವಾರರಿಬ್ಬರು ಸಾವಿಗೀಡಾದ ಘಟನೆ ಅತ್ತಿಬೆಲೆಯ (Attibele) ಸಮೀಪದ ಗೆಸ್ಟ್ ಲೈನ್ ಗೇಟ್ ಬಳಿ ನಡೆದಿದೆ.
ಓರ್ವ ಮೃತನನ್ನು ಮಂಗಮ್ಮನಪಾಳ್ಯ ವಾಸಿ ಮಂಜಪ್ಪ (32) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ. ಲಾರಿ ಹಿಂಬದಿಯಿಂದ ಬೈಕ್‍ಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅಪಘಾತದ ಬಳಿಕ ಲಾರಿಯನ್ನು ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ. ಇದನ್ನೂ ಓದಿ: ದೇಶವೇ ಎದುರು ನೋಡುತ್ತಿರೋ ಚಂದ್ರಯಾನ-3ಗೆ ಬೆಳಗಾವಿಯ ಯುವ ವಿಜ್ಞಾನಿಯ ಕೊಡುಗೆ
ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು (Police) ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಹತ್ತಿರದ ಖಾಸಗಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಇದನ್ನೂ ಓದಿ: ಚಂದ್ರಯಾನ -3 ಉಡಾವಣೆಗೆ ಕ್ಷಣಗಣನೆ: ಶುಭಕೋರಿದ ಖಾದರ್
Web Stories