ಮೈಸೂರು: ಮೈಸೂರಿನ (Mysuru) ರಿಂಗ್ ರಸ್ತೆಯ ಸಮೀಪದ ಫಾಕ್ಸ್ ಜೆನ್ ಪಬ್‌ನಲ್ಲಿ(Fire in Pub) ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ(Fire Accident) ಇಬ್ಬರು ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.
ದಟ್ಟಗಳ್ಳಿ 4ನೇ ಹಂತದ ಬಳಿ ಇರುವ ಪಬ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿ ಪಬ್ ಸಂಪೂರ್ಣ ಸುಟ್ಟು ಹೋಗಿದೆ. ಅವಘಡದಲ್ಲಿ ಸಾಹೀನ್ ಮತ್ತು ಪ್ರಕಾಶ್ ಎಂಬ ಇಬ್ಬರು ಸಜೀವ ದಹನಗೊಂಡಿದ್ದಾರೆ ಎಂದು ತಿಳಿದುಬಂದಿದೆ.ಇದನ್ನೂ ಓದಿ: ಮತ್ತೊಂದು ‘ಪೆಟ್ರೋ ಡಾಲರ್’ ಒಪ್ಪಂದಕ್ಕೆ ಟ್ರಂಪ್ ಮಾಸ್ಟರ್ ಪ್ಲಾನ್- ಮಧ್ಯಪ್ರಾಚ್ಯದ 20% ಆದಾಯಕ್ಕೆ ಅಮೆರಿಕ ಬೇಡಿಕೆ!
ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಇದನ್ನೂ ಓದಿ: ರಸ್ತೆಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸಾವು, ಐವರಿಗೆ ಗಾಯ
