ಬೀದರ್: ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ನ್ಯಾಯಾಲಯದ ಆದೇಶದಂತೆ ಪರಿಹಾರ ನೀಡಲು ಹಿಂದೇಟು ಹಾಕಿದ್ದ ಹಿನ್ನೆಲೆಯಲ್ಲಿ ಎರಡು ಸಾರಿಗೆ ಬಸ್‌ಗಳನ್ನು ಜಪ್ತಿ ಮಾಡಿದ ಘಟನೆ ಬೀದರ್ (Bidar) ಜಿಲ್ಲೆಯ ಔರಾದ್‌ನಲ್ಲಿ ನಡೆದಿದೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC)ಗೆ ಸೇರಿದ ಔರಾದ್ ಡಿಪೋದ ಎರಡು ಬಸ್‌ಗಳನ್ನು ಜಪ್ತಿ ಮಾಡಲಾಗಿದೆ. ಔರಾದ್ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ಆದೇಶದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಜಪ್ತಿ ಮಾಡಲಾದ ಎರಡು ಬಸ್‌ಗಳನ್ನು ನ್ಯಾಯಾಲಯದ ಆವರಣದಲ್ಲಿ ನಿಲ್ಲಿಸಲಾಗಿದೆ. ಇದನ್ನೂ ಓದಿ: ಕೊಲ್ಲೂರಿಗೆ ಸಿಎಂ ವಿಜಯ್ ಬರ್ತಿದ್ದಾರೆ ಅನ್ನೋ ಕಾರಣಕ್ಕೆ ವಿಶೇಷ ಪೂಜೆಗಳೇನು ಇರಲ್ಲ: ಅರ್ಚಕ ನಿತ್ಯಾನಂದ ಅಡಿಗ
2024ರ ಫೆಬ್ರವರಿ 28ರಂದು ಕಮಲನಗರ ಸಮೀಪ ಕೆಕೆಆರ್‌ಟಿಸಿ ಬಸ್‌ವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದರು. ಈ ಪ್ರಕರಣದಲ್ಲಿ ಮೃತಪಟ್ಟ ವೀರಭದ್ರ ಅವರ ಪತ್ನಿ ಸುವರ್ಣ ಅವರು ಪರಿಹಾರ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಸುವರ್ಣ ಅವರಿಗೆ ಒಟ್ಟು 36 ಲಕ್ಷ 63 ಸಾವಿರ ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿತ್ತು. ಆದರೆ ನ್ಯಾಯಾಲಯದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಎರಡು ಸಾರಿಗೆ ಬಸ್‌ಗಳನ್ನು ಜಪ್ತಿ ಮಾಡಲು ನ್ಯಾಯಾಲಯ ಆದೇಶ ನೀಡಿದೆ.ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್ ಹೆಸರು ತಳುಕು – ಎಕ್ಸ್ ಪೋಸ್ಟ್‌ನಲ್ಲಿ ನಟ ಸ್ಪಷ್ಟನೆ
