ಶ್ರೀನಗರ: ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ (Lashkar-e-Taiba) ಇಬ್ಬರು ಸಹಚರರನ್ನು ಭದ್ರತಾ ಪಡೆಗಳು (Indian Army) ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಬಂಧಿಸಿದೆ.
ಬಂಧಿತರನ್ನು ಶಾಹಿದ್ ಅಹ್ಮದ್ ಲೋನ್ ಹಾಗೂ ವಸೀಮ್ ಅಹ್ಮದ್ ಗನಿ ಎಂದು ಗುರುತಿಸಲಾಗಿದೆ. ಬಂಧಿತರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಬ್ಬರೂ ಸ್ಥಳಿಯ ನಿವಾಸಿಗಳಾಗಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: Karnataka Election 2023 | ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಮತದಾನ | Live Updates
Advertisement
Advertisement
ಓರ್ವ ಉಗ್ರನಿಂದ 1 ಪಿಸ್ತೂಲ್, 1 ಪಿಸ್ತೂಲ್ ಮ್ಯಾಗಜೀನ್, 4 ಪಿಸ್ತೂಲ್ ರೌಂಡ್ಸ್, 1 ರಿವಾಲ್ವಾರ್ ಸೈಲೆನ್ಸರ್, 1 ಐಇಡಿ (IED), 1 ರಿಮೋಟ್ ಕಂಟ್ರೋಲ್, 2 ಬ್ಯಾಟರಿಗಳು, ಎಕೆ 47 ರೈಫಲ್‍ನ 1 ಖಾಲಿ ಮ್ಯಾಗಜೀನ್ ಹಾಗೂ ಇನ್ನಿತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತೋರ್ವನಿಂದ 1 ಎಕೆ ಸಿರೀಸ್ ರೈಫಲ್, 1 ಮ್ಯಾಗಜೀನ್ ಮತ್ತು 10 ಸುತ್ತಿನ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
Advertisement
ಏ. 20ರಂದು ಕಾಶ್ಮೀರದ ಪೂಂಚ್ ಸೆಕ್ಟರ್‍ನಲ್ಲಿ ಸೇನಾ ವಾಹಾನದ ಮೇಲೆ ಉಗ್ರರು ದಾಳಿ ನಡೆಸಿ ಐವರು ಯೋಧರನ್ನು ಹತ್ಯೆಗೈದಿದ್ದರು. ಈ ವೇಳೆ ಭದ್ರತಾ ಪಡೆ, ಉಗ್ರರಿಗೆ ಸ್ಥಳೀಯರು ಸಹಕಾರ ನೀಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದ ವಿವಿಧ ಪ್ರದೇಶಗಳಲ್ಲಿ ಸೇನೆ ಕಾರ್ಯಚರಣೆ ಆರಂಭಿಸಿತ್ತು. ಇದನ್ನೂ ಓದಿ: ಉಗ್ರರ ಜೊತೆ ಸ್ಥಳೀಯರ ಶಾಮೀಲು – ಜಮ್ಮು ಕಾಶ್ಮೀರದಲ್ಲಿ 15 ಕಡೆ ಎನ್‍ಐಎ ಶೋಧ