ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯು ಬಾರಾಮುಲ್ಲಾದಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (ಎಲ್‍ಇಟಿ) ಜೊತೆ ಸಂಪರ್ಕ ಹೊಂದಿದ್ದ ಇಬ್ಬರು ಸಕ್ರಿಯ ಭಯೋತ್ಪಾದಕರನ್ನು ಬಂಧಿಸಿದೆ.
ಉಗ್ರರ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆ ತಕ್ಷಣ ಕಾರ್ಯಚರಣೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಇಬ್ಬರು ಉಗ್ರರನ್ನು ಬಾರಾಮುಲ್ಲಾದ ನೆಹಲ್ಪೋರಾ ಪಟ್ಟಣ ಪ್ರದೇಶದ ನಿವಾಸಿಗಳಾದ ಅಬ್ದುಲ್ ರೆಹಮಾನ್ ಮೀರ್ ಅವರ ಮಗ ಇರ್ಷಾದ್ ಅಹ್ಮದ್ ಮಿರ್ ಮತ್ತು ಬಶೀರ್ ಅಹ್ಮದ್ ಅವರ ಮಗ ಜಾಹಿದ್ ಬಶೀರ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಸರ್ಕಾರಿ ಶಾಲಾ ಶಿಕ್ಷಕರೇ ಖತರ್ನಾಕ್ ಕಳ್ಳನ ಟಾರ್ಗೆಟ್ – ಆನ್‍ಲೈನ್ ಮೂಲಕ ಹಣ ಲೂಟಿ
Advertisement
Advertisement
ಇದೇ ವೇಳೆ ಬಂಧಿತ ಭಯೋತ್ಪಾದಕರ ಬಳಿ ಇದ್ದ 2 ಚೈನೀಸ್ ಪಿಸ್ತೂಲ್‍ಗಳು, 18 ಲೈವ್ ಸುತ್ತಿನ ಕಾಟ್ರ್ರಿಡ್ಜ್‍ಗಳು ಮತ್ತು 2 ಮ್ಯಾಗಜೀನ್‍ಗಳು ಸೇರಿದಂತೆ ದೋಷಾರೋಪಣೆಯ ಸಾಮಗ್ರಿಗಳು, ಮದ್ದುಗುಂಡುಗಳ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಹಿಜಬ್ ಸಂಘರ್ಷ ಮಧ್ಯೆ ಸಾವರ್ಕರ್ ಫೋಟೋ ವಿವಾದ – ವಿದ್ಯಾರ್ಥಿಗಳ ಮೇಲೆ ಹಲ್ಲೆ