ಬೆಳಗಾವಿ: ಮಹಾರಾಷ್ಟ್ರದ ಇಬ್ಬರು ಸಚಿವರು, ಓರ್ವ ಸಂಸದನ ಗಡಿ ಪ್ರವೇಶಕ್ಕೆ ನಿಷೇಧ ಹೇರಿ ಬೆಳಗಾವಿ ಡಿಸಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ ಡಿಸಿ ನಿತೇಶ್ ಪಾಟೀಲ್, ಮಹಾರಾಷ್ಟ್ರದ ಇಬ್ಬರು ಸಚಿವರು, ಓರ್ವ ಸಂಸದನ ಗಡಿ ಪ್ರವೇಶಕ್ಕೆ ಸಿಆರ್‌ಪಿಸಿ 1973 ಕಲಂ 144(3)ರ ಅನ್ವಯ ಪ್ರದತ್ತ ಅಧಿಕಾರ ಬಳಸಿ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಿಸದಂತೆ ನಿರ್ಬಂಧಿತ ಆದೇಶ ಮಾಡಿದ್ದಾರೆ. ಇದನ್ನೂ ಓದಿ: 47 ವರ್ಷದ ಹೋರಾಟದ ಬಳಿಕ ದತ್ತಪೀಠದಲ್ಲಿ ನೆರವೇರಿತು ಹಿಂದೂ ಅರ್ಚಕರಿಂದ ಪೂಜೆ
Advertisement
Advertisement
ಮಹಾರಾಷ್ಟ್ರದ ಗಡಿ ಸಮನ್ವಯ ಸಚಿವ ಚಂದ್ರಕಾಂತ್ ಪಾಟೀಲ್, ಶಂಭುರಾಜ್ ದೇಸಾಯಿ ಹಾಗೂ ಮಹಾರಾಷ್ಟ್ರದ ಗಡಿತಜ್ಞ ಸಮಿತಿ ಅಧ್ಯಕ್ಷ, ಸಂಸದ ಧೈರ್ಯಶೀಲ್ ಮಾನೆಗೆ ನಿಷೇಧ ಹೊರಡಿಸಲಾಗಿದೆ. ಇದನ್ನೂ ಓದಿ: ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ರದ್ದಾಗುವ ಸುಳಿವು – ಸಿಎಂ ನಿರ್ಧರಿಸುತ್ತಾರೆ ಎಂದ ದೇವೇಂದ್ರ ಫಡ್ನವಿಸ್
Advertisement
ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಡಿಸಿ ಕ್ರಮ ಕೈಗೊಂಡಿದ್ದಾರೆ. ಮಹಾರಾಷ್ಟ್ರದ ಸಚಿವರ ಆಗಮನದ ಹಿನ್ನೆಲೆ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಇದೆ. ಭಾಷಾ ವೈಷಮ್ಯ ಬೆಳೆದು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯುಂಟಾಗುವ ಸಾಧ್ಯತೆ ಇದೆ. ಹೀಗಾಗಿ ಸಾರ್ವಜನಿಕರ ನೆಮ್ಮದಿ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮ ಕೈಗೊಂಡು ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಿಸದಂತೆ ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ.